ಹೈದರಾಬಾದ್: ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ ಕೈಮುಗಿದು ನಮಸ್ಕರಿಸುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಯುಕ್ತ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಸಚಿವ ಜಮೀರ್ ಅಹಮ್ಮದ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವುದೇ ನನ್ನ ಆದ್ಯತೆ: ವಿಜಯೇಂದ್ರ
ಇನ್ನು ಮುಂದುವರೆದು ಮಾತನಾಡಿದ ಅವರು, ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.