Thursday, September 28, 2023
spot_img
- Advertisement -spot_img

ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅಮಾನತಿಗೆ ಸಚಿವ ಜಮೀರ್‌ ಆದೇಶ

ದಕ್ಷಿಣ ಕನ್ನಡ : ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು.

ಸಚಿವ ಜಮೀರ್ ಅಹಮದ್ ದಿಢಿರ್ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದರು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ತೆರಳಿದ್ದ ಸಚಿವರು ಹಾಸ್ಟೆಲ್‍ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಅವ್ಯವಸ್ಥೆ ಕಂಡು ಬಂದಿದೆ.

ಅದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಸಚಿವರೊಂದಿಗೆ ಮಾತನಾಡಿದ್ದು, ಅವರಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ, ವಾರಕ್ಕೊಮ್ಮೆ ನೀಡಬೇಕಿದ್ದ ಚಿಕನ್ ಪದಾರ್ಥಗಳನ್ನು ಹದಿನೈದು ದಿನಗಳಿಗೊಮ್ಮೆ ನೀಡಲಾಗುತ್ತಿದೆ ಹಾಗೆಯೇ ಚಾರ್ಟ್ ಪ್ರಕಾರ ಆಹಾರ ಪೂರೈಕೆ ಮಾಡುತ್ತಿಲ್ಲ ಮತ್ತು ಐದು ವರ್ಷ ಆದರೂ ಬೆಡ್ ಶೀಟ್, ತಲೆದಿಂಬು ನೀಡಿಲ್ಲ ಎಂದು ಆರೋಪಿಸಿದರು.

ತಕ್ಷಣ ಸಚಿವ ಜಮೀರ್ ಅಹಮದ್‍ರವರು ತಾಲೂಕು ವಿಸ್ತರಣಾ ಅಧಿಕಾರಿಯಾಗಿದ್ದ ಮಂಜುನಾಥ್ ಅವರನ್ನು ತಕ್ಷಣ ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು. ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್‍ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಇದೇ ವೇಳೆ ಸೂಚಿಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles