ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ಇದರಿಂದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ನೆರವಾಗಲಿದೆ ಎಂದು ಹೇಳಿದೆ.
ಈ ಸಂಬಂಧ ಶಿಕ್ಷಣ ಸಚಿವಾಲಯವು NEPಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದ್ದು, 2024ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದೆ.
ಈ ಹೊಸ ಬದಲಾವಣೆಯಂತೆ ಇನ್ನು ಮುಂದೆ 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಎರಡು ಭಾಷೆಗಳನ್ನು ಅಧ್ಯಯನ ಮಾಡಬೇಕಾಗಿದೆ. ಅವುಗಳಲ್ಲಿ ಕನಿಷ್ಠ ಒಂದು ಭಾರತೀಯ ಭಾಷೆ ಓದುವುದು ಕಡ್ಡಾಯ ಎಂದು ಹೇಳಿದೆ.
ಇದನ್ನೂ ಓದಿ: ಚಂದ್ರಯಾನ 3 ಯಶಸ್ವಿಗೆ ಪೇಜಾವರ ಶ್ರೀಗಳಿಂದ ವಿಶೇಷ ಪೂಜೆ
ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಹಾಗೂ ಸಾಕಷ್ಟು ಕಾಲಾವಕಾಶವನ್ನು ಬಳಸಿಕೊಳ್ಳಲು ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನೀಡಲಾಗುವುದು. ವಿದ್ಯಾರ್ಥಿಗಳು ಅವರು ಪೂರ್ಣಗೊಳಿಸಿದ ವಿಷಯಗಳಲ್ಲೇ ಬೋರ್ಡ್ ಪರೀಕ್ಷೆಗೆ ಹಾಜರಾಗಬಹುದು ಹಾಗೂ ಸಿದ್ಧರಾಗಬಹುದು. ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು ಎಂದೂ ಸಚಿವಾಲಯ ತಿಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.