ಮಂಗಳೂರು: ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದು, ಸದ್ಯ ಸಾಮಾಜಿಕ ತಾಣಗಳಲ್ಲಿ ಮಿಥುನ್ ರೈ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕ ಮಿಥುನ್ ರೈ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಪತ್ರಿಕೆಗಳಲ್ಲಿ ಬಂದಿದ್ದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.ಮಿಥುನ್ ರೈ ಕೂಡಲೇ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಮಿಥುನ್ ರೈ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಖಂಡಿಸಿದ್ದು, ಮಿಥುನ್ ರೈ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದು. ಶ್ರೀಕೃಷ್ಣ ಮಠಕ್ಕೆ 800 ವರ್ಷಗಳ ಇತಿಹಾಸ ಇದೆ. ಹಿಂದೂಗಳಿಗೆ ಅವಮಾನ ಆಗುವಂತಹ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದ ಇತಿಹಾಸ ಇವರಿಗೇನು ಗೊತ್ತು ಅಂತಾ ಕರಾವಳಿಯ ಜನರು ಮಿಥುನ್ ರೈಗೆ ಪ್ರಶ್ನೆ ಮಾಡ್ತಿದ್ದಾರೆ.