Sunday, March 26, 2023
spot_img
- Advertisement -spot_img

ಎಂ.ಕೆ ಪ್ರಾಣೇಶ್ ಸರ್ವ ಸದಸ್ಯರ ವಿಶ್ವಾಸ ಮತ್ತು ಪ್ರೀತಿಯನ್ನು ಗಳಿಸುತ್ತಾರೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಎಂ.ಕೆ ಪ್ರಾಣೇಶ್ ಸರ್ವ ಸದಸ್ಯರ ವಿಶ್ವಾಸ ಮತ್ತು ಪ್ರೀತಿಯನ್ನು ಗಳಿಸುತ್ತಾರೆ. ಎಂ.ಕೆ.ಪ್ರಾಣೇಶ್ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಮಾಡಿ ಪರಿಹಾರ ಪಡೆಯುವ ಸಜ್ಜನ ರಾಜಕಾರಣಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿಗಳಾಗಿ ಆಯ್ಕೆಯಾಗಿರುವ ಎಂ.ಕೆ. ಪ್ರಾಣೇಶ್ ಅವರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಎಂ.ಕೆ. ಪ್ರಾಣೇಶ್ ಅವರಿಂದ ವಿಧಾನಪರಿಷತ್ ಉಪಸಭಾಪತಿಸ್ಥಾನಕ್ಕೆ ಬೆಲೆ ಸಿಗಲಿದೆ. ಆ ಮೂಲಕ ಕರ್ನಾಟಕದ ಜನರ ಸಮಸ್ಯೆಗಳಿಗೆ ಉತ್ತರ ಸಿಗಲಿದೆ ಎಂದರು.
ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಪಾತ್ರ ವಹಿಸಿದರು. ಆ ಭಾಗದ ರೈತರ, ಕಾಡಂಚಿನ ಜನರು, ಬುಡ ಕಟ್ಟು ಜನಾಂಗದವರ, ಕಾಫಿ ಬೆಳೆಗಾರರ ಸಮಸ್ಯೆ ಇರಬಹುದು. ಚಿಕ್ಕಮಗಳೂರಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಒಡನಾಡಿಯಾಗಿ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿ, ಒಂದು ದಶಕಕ್ಕೂ ಹೆಚ್ಚಿನ ಕಾಲ ಕೆಲಸ ಮಾಡಿದ್ದಾರೆ ಎಂದರು.

ಕಳೆದ ಬಾರಿ ಉಪಸಭಾಪತಿಯಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಸಭಾಪತಿಗಳು ಪರಿಷತ್ತಿಗೆ ದೊರೆತಿದ್ದು, ಕೆಲಸದ ಭಾರವನ್ನು ನಿಭಾಯಿಸುವ ಶಕ್ತಿ, ಸಾಮಥ್ರ್ಯ ಅವರಲ್ಲಿದೆ. ಸದನವನ್ನು ಅತ್ಯಂತ ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಲಿದೆ ಎಂದರು.

Related Articles

- Advertisement -

Latest Articles