ಕಾಂಚೀಪುರಂ : ಕುಟುಂಬದ ಮುಖ್ಯಸ್ಥೆಗೆ ಮಾಸಿಕ 1,000 ರೂ. ಧನಸಹಾಯ ನೀಡುವ ತಮಿಳುನಾಡಿನ ಡಿಎಂಕೆ ಸರ್ಕಾರದ ಪ್ರಮುಖ ಸಮಾಜ ಕಲ್ಯಾಣ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಚಾಲನೆ ನೀಡಿದರು.
ಸಿಎಂ ಸ್ಟಾಲಿನ್ ಅವರು ಇಲ್ಲಿ ಯೋಜನೆಗೆ ಚಾಲನೆ ನೀಡಿದರು ಮತ್ತು ಹಲವಾರು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್‌ಗಳನ್ನು ವಿತರಿಸಿದರು. ರಾಜ್ಯ ಸಚಿವರು ತಮ್ಮ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡಿ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ : Nuh Communal Clashes : ನೂಹ್ ಕೋಮು ಘರ್ಷಣೆಗೆ ಕಾರಣವಾಗಿದ್ದ ಕಾಂಗ್ರೆಸ್ ಶಾಸಕ ಅರೆಸ್ಟ್
ಈ ಸಹಾಯಧನ ಯೋಜನೆಗೆ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಹೆಸರನ್ನು ಇಡಲಾಗಿದೆ ಮತ್ತು ರಾಜ್ಯ ಸರ್ಕಾರವು ಈ ಯೋಜನೆಯನ್ನು ಮಹಿಳೆಯರ “ಹಕ್ಕು” ಎಂದು ನಾಮಕರಣ ಮಾಡಿದೆ.
ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು (1,06,50,000) ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ ಮತ್ತು 1,000 ರೂ. ಸಹಾಯವನ್ನು ಫಲಾನುಭವಿಗಳಿಗೆ ನೇರ ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.