Monday, December 4, 2023
spot_img
- Advertisement -spot_img

ಪ್ರತಿ ತಿಂಗಳು ಮಹಿಳೆಯರಿಗೆ ₹1 ಸಾವಿರ; ಸಿಎಂ ಸ್ಟಾಲಿನ್ ಅಧಿಕೃತ ಚಾಲನೆ

ಚೆನ್ನೈ: ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ ನೀಡುವ ಯೋಜನೆಗೆ ಇಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಚಾಲನೆ ನೀಡಿದ್ದಾರೆ. ದ್ರಾವಿಡ ಚಳವಳಿಯ ಐಕಾನ್ ಸಿ.ಎನ್ ಅಣ್ಣಾದೊರೈ ಅವರ ಜನ್ಮದಿನ ಹಿನ್ನೆಲೆ ಇಂದು ಯೋಜನೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಈ ಯೋಜನೆಗಾಗಿ ತಮಿಳುನಾಡು ಸರ್ಕಾರ ಈ ವರ್ಷ 7 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆ. ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿ ಅವರ ಖಾತೆಗೆ ನೇರವಾಗಿ ಜಮಾ ಆಗಲಿದೆ.

ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸ್ಟಾಲಿನ್, ‘ಇದು ದ್ರಾವಿಡ ಮಾದರಿ ಆಡಳಿತದ ಯೋಜನೆಯಾಗಿದೆ. ರಾಜ್ಯದಲ್ಲಿ ಬಡತನ ನಿರ್ಮೂಲನೆಯ ಹೆಜ್ಜೆಯಾಗಿದೆ. ಪೆರಿಯಾರ್, ಅಣ್ಣಾ ಮತ್ತು ಕಲೈಂಜರ್ (ಕರುಣಾನಿಧಿ) ಅವರಿಂದ ಕಲಿತ ಪಾಠಗಳ ಆಧಾರದ ಮೇಲೆ ನಾವು ಈ ಕಾರ್ಯಕ್ರಮಗಳ ಜಾರಿಗೆ ತಂದಿದ್ದೇವೆ’ ಎಂದರು.

ಇದನ್ನೂ ಓದಿ: ಈದ್ಗಾ ವಿವಾದ; ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ

ಇಡೀ ಭಾರತವು ಡಿಎಂಕೆ ಜಾರಿಗೊಳಿಸಿದ ಯೋಜನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಇತರ ರಾಜ್ಯಗಳು ಈ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕವಾಗಿವೆ. ನಾನು INDIA ಒಕ್ಕೂಟ ಸಭೆಗಳಿಗೆ ಹೋದಾಗ, ಸಭೆಯಲ್ಲಿ ಭಾಗವಹಿಸುವ ನಾಯಕರು ನಮ್ಮ ಸರ್ಕಾರ ತಂದಿರುವ ಯೋಜನೆಗಳನ್ನು ಆಸಕ್ತಿಯಿಂದ ವಿಚಾರಿಸುತ್ತಾರೆ. ಅವರು ತಮ್ಮ ರಾಜ್ಯಗಳಲ್ಲಿ ಅವುಗಳನ್ನು ಜಾರಿಗೆ ತರಲು ಯೋಚಿಸುತ್ತಾರೆ ಎಂದಿದ್ದಾರೆ.

ದೆಹಲಿಯಲ್ಲಿ ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದಾಗ ಕೆಲವು ಕೇಂದ್ರ ಸಚಿವರು ತಮಿಳುನಾಡಿನ ಯೋಜನೆಗಳ ಬಗ್ಗೆ ವಿಚಾರಿಸಿದ್ದಾರೆ. ಇದನ್ನು ನನ್ನ ಬಗ್ಗೆ ಹೇಳಿಕೊಳ್ಳುವುದಲ್ಲ, ಇದು ತಮಿಳುನಾಡು ಸರ್ಕಾರ ಹಾಗೂ ಜನತೆಗೆ ಹೆಮ್ಮೆ ತರಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅನುದಾನ ಬಿಡುಗಡೆ ಮಾಡದೇ ದ್ವೇಷ ಮಾಡ್ತಿದೆ

ಈ ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ ಮತ್ತು 1,000 ರೂ. ಸಹಾಯ ಧನವನ್ನು ಫಲಾನುಭವಿಗಳಿಗೆ ನೇರ ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ ಎಂದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles