ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ವಿಚಾರ ಸಖತ್ ಸದ್ದು ಮಾಡುತ್ತಿದ್ದು, ಇದೀಗ 16ರಿಂದ 18 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಬಹುದು ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್‌ಗೆ ಬರುತ್ತೇನೆ ಅಂದರೂ ಬೇಡ ಅನ್ನಲ್ಲ. ಪಕ್ಷಕ್ಕೆ ಬರುವವರ ಪಟ್ಟಿ ಈಗಾಗಲೇ ಸಿದ್ಧ ಮಾಡಿದ್ದಾರೆ, ಈ ಬಗ್ಗೆ ನಾಯಕರು ತೀರ್ಮಾನಿಸುತ್ತಾರೆ. ಶಂಕರಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ಆಗಿಲ್ಲ. ಇನ್ನು ಪ್ರಲ್ಹಾದ ಜೋಶಿ ಅವರು ಊರಿಗೆ ಬಂದವರು ನೀರಿಗೆ ಬರಲೇಬೇಕು ಎಂದರು.
ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ಅನುಮತಿ ಕೊಡಲಿ. ನಮ್ಮ ಸರ್ಕಾರ ಟೆಂಡರ್ ಕರೆಯದಿದ್ದರೆ ನಾನು ಹುಬ್ಬಳ್ಳಿಗೆ ಕಾಲಿಡಲ್ಲ. ನನಗೆ ಆ ತಾಕತ್ ಇದೆ, ಕೇಂದ್ರ ಸರ್ಕಾರ ಅನುಮತಿ ನೀಡಲಿ. ನಮ್ಮ ಸರ್ಕಾರದಿಂದ ಟೆಂಡರ್ ಕರೆಸುತ್ತೇನೆ. ಲೋಕಸಭೆ ಚುನಾವಣೆ ಇದೆ. ಮಹದಾಯಿ ಯೋಜನೆ ಮಾಡಿಸಿಕೊಡಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ನಾಲ್ಕು ತಲೆಮಾರಿನ 4ಜಿ ಪಕ್ಷ: ಅಮಿತ್ ಶಾ
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಶಾಸಕರಾಗಲಿ, ಪ್ರಮುಖರಾಗಲಿ ಕಾಂಗ್ರೆಸ್‌ಗೆ ಹೋಗುತ್ತಿಲ್ಲ ಎಂದರು.
ದೇಶ, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅತ್ಯಂತ ಸದೃಢವಾಗಿದೆ. ಕರ್ನಾಟಕದಲ್ಲಿಯೂ ಈ ಬಾರಿ 25 ಸ್ಥಾನಗಳನ್ನು ಗೆಲ್ಲುತ್ತೇವೆ. ಒಂದೆರಡು ಸ್ಥಾನಗಳು ಆ ಕಡೆ ಈ ಕಡೆ ಆಗಬಹುದು ಅಷ್ಟೇ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.