ಕೋಲಾರ: ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿರುವ ಆರೋಪದಡಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಪ್ರಕರಣ ಸಂಬಂಧ ನಂಜೇಗೌಡರು ಸಲ್ಲಿಸಿದ್ದ ಎಫ್‌ಐಆರ್ ರದ್ದು ಕೋರಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
2022ರಲ್ಲಿ ಮಾಲೂರು ತಾಲ್ಲೂಕಿನಲ್ಲಿ ದರಖಾಸ್ತು ಸಮಿತಿ ಅಧ್ಯಕ್ಷರಾಗಿದ್ದಾಗ ಸುಮಾರು 150 ಕೋಟಿ ರೂಪಾಯಿ ಮೌಲ್ಯದ 80 ಎಕರೆ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಬಲಾಡ್ಯರಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಕೆ.ಸಿ ರಾಜಣ್ಣ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ನಿಮ್ಮನ್ನ ಲ್ಯಾಂಡ್ ಲಾರ್ಡ್ ಅಂದುಕೊಂಡಿದ್ದೀರಾ : ಅಧಿಕಾರಿಗಳಿಗೆ ಕಂದಾಯ ಸಚಿವ ಕ್ಲಾಸ್
ದೂರಿನ ಮೇರೆಗೆ ಶಾಸಕರ ವಿರುದ್ಧ ಎಫ್‌ಐಆರ್ ಸಹ ದಾಖಲಾಗಿತ್ತು. ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಶಾಸಕರು ಅರ್ಜಿ ಸಲ್ಲಿಸಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿದ್ದು, ಪ್ರಕರಣ ಸಂಬಂಧ ತೀರ್ಪನ್ನು ಕಾಯ್ದಿರಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.