ಯಾದಗಿರಿ: ಸಿದ್ದರಾಮಯ್ಯಗೆ ಕೋಲಾರದಲ್ಲಿ ಸ್ಪರ್ಧಿಸೋದು ಬೇಡ ಎಂದು ರಾಹುಲ್ ಗಾಂಧಿ ಹೇಳೋದು ತಪ್ಪು ಎಂದು ಬಿಜೆಪಿ ಶಾಸಕ ರಾಜುಗೌಡ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯವಾಗಿ ಎತ್ತರಕ್ಕೆ ಬೆಳೆದಾಗ ಸ್ವಪಕ್ಷದಲ್ಲಿ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅವರ ಪಕ್ಷದವರೇ ಸೋಲಿಸಲು ಪ್ಲ್ಯಾನ್ ಮಾಡುತ್ತಿರಬಹುದು. ಆದರೆ ಕೋಲಾರದಲ್ಲಿ ಸ್ಪರ್ಧೆ ಬೇಡ ಅನ್ನೋದು ತಪ್ಪು, ಅವರೊಬ್ಬ ದೊಡ್ಡ ನಾಯಕರು ಎಂದಿದ್ದಾರೆ.
ಸಿದ್ದರಾಮಯ್ಯಗೆ ಕೋಲಾರದಲ್ಲಿ ಸ್ಪರ್ಧಿಸುವುದು ಬೇಡ ಎನ್ನುವುದು ತಪ್ಪು, ಕೊನೆಯ ಚುನಾವಣೆಯ ಸಮಯದಲ್ಲಿ ಜಾಸ್ತಿ ರಿಸ್ಕ್ ತೆಗೆದುಕೊಳ್ಳುವುದು ಬೇಡ. ನಿಮ್ಮ ಪುತ್ರ ಯತೀಂದ್ರಗೆ ಮುಂದೆ ಸೂಕ್ತ ಅವಕಾಶ ನೀಡುತ್ತೇವೆ ಎಂದು ಹೈಕಮಾಂಡ್ ಹೇಳಿದೆ, ಈ ರೀತಿಯ ನಿರ್ಧಾರ ಕೊನೆಕ್ಷಣದಲ್ಲಿ ಸರಿಯಲ್ಲ, ಕಾಂಗ್ರೆಸ್ನಲ್ಲಿಯೇ ಸಿದ್ದರಾಮಯ್ಯರಿಗೆ ವಿರೋಧಿಗಳು ಹುಟ್ಟಿಕೊಂಡಿದ್ದಾರೆ ಅವರ ಪಕ್ಷದವರೇ ಸೋಲಿಸಲು ಪ್ಲ್ಯಾನ್ ಮಾಡುತ್ತಿರಬಹುದು ಎಂದರು.
ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನವರೇ ನಮ್ಮ ಪಕ್ಷಕ್ಕೆ ಬರುವುದಾಗಿ ಕೇಳುತ್ತಿದ್ದಾರೆ. ಆದರೆ ಇಲ್ಲಿ ಇರುವವರಿಗೇ ಅವಕಾಶ ಸಿಗುತ್ತಿಲ್ಲ. ಆದರೂ ಸಿದ್ದರಾಮಯ್ಯರನ್ನು ಬಿಜೆಪಿಗೆ ಕರೆತರಲು ಯತ್ನಿಸುತ್ತಿದ್ದೇನೆ. ಈ ಪ್ರಯತ್ನದಲ್ಲಿ ಯಶಸ್ವಿಯಾಗುವ ವಿಶ್ವಾಸ ಇದೆ ಎಂದು ರಾಜು ಗೌಡ ಈ ಹಿಂದೆ ಹೇಳಿಕೆ ಕೊಟ್ಟಿದ್ದರು. ಇದೀಗ ಸಿದ್ದರಾಮಯ್ಯ ಪರ ರಾಜುಗೌಡ ಮಾತಾಡಿದ್ದಾರೆ.