ಬೆಂಗಳೂರು: ಮೊಸರಲ್ಲಿ ಕಲ್ಲು ಹುಡುಕುವ ಕೆಲ್ಸ ಬಿಡಿ ಎಂದು ಮೋದಿ ಬೆಂಗಳೂರಿಗೆ ಆಗಮಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಶಾಸಕ ವಿಶ್ವನಾಥ್ ಕಿಡಿಕಾರಿದ್ದಾರೆ. ಜಾಲಹಳ್ಳಿ ಕ್ರಾಸ್ ಬಳಿಕ ಮಾತನಾಡಿರುವ ಅವರು, ಇಸ್ರೋ ಸಾಧನೆಯನ್ನು ಮೆಚ್ಚಿ ವಿಜ್ಞಾನಿಗಳನ್ನು ಅಭಿನಂದಿಸಲು ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಮೋದಿ ಆಗಮಿಸುತ್ತಿದ್ದಾರೆ. ಇದರಲ್ಲೂ ರಾಜಕಾರಣ ಮಾಡ್ತಿರೋದು ಸರಿಯಲ್ಲ ಎಂದಿದ್ದಾರೆ.
ಮೊಸರಲ್ಲಿ ಕಲ್ಲು ಹುಡುಕೋ ಕೆಲ್ಸ ಮಾಡ್ತಿರೋದು ಸರಿಯಲ್ಲ, ಇಂಥದ್ರಲ್ಲಿ ರಾಜಕಾರಣ ಮಾಡೋರ ಬಗ್ಗೆ ಏನೂ ಮಾತನಾಡಲ್ಲ, ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕೋ ಕೆಲ್ಸ ಮಾಡ್ತಿದ್ದಾರೆ. ಬ್ರಿಟೀಷರ ವಿರುದ್ಧ ನಮ್ಮವರೇ ಪಿತೂರಿ ಮಾಡಿದ್ರು, ಅದೇ ರೀತಿ ಇಂಥ ವಿಚಾರದಲ್ಲಿ ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ಟೀಕೆಗೆ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: Live Updates : ಇಸ್ರೋ ಶ್ರಮದ ಶ್ಲಾಘನೆಗೆ ಕರುನಾಡಿಗೆ ಬಂದಿಳಿದ ಪ್ರಧಾನಿ ಮೋದಿ
ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳನ್ನು ಖುದ್ದು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಡೀ ಚಂದ್ರಯಾನದ ತಂಡವನ್ನು ಭೇಟಿಯಾಗಿ ಅಭಿನಂದಿಸಲಿದ್ದು, ಬಳಿಕ ಮತ್ತೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.