ಬೆಂಗಳೂರು: ಕೋಮುಗಲಭೆ, ನೈತಿಕ ಪೋಲೀಸ್ ಗಿರಿಯಲ್ಲಿ ಭಾಗಿಯಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಶಿಫಾರಸ್ಸಿಗೆ ಕಾರಣ ಕೇಳಿಕೆ ನೋಟಿಸ್ ಜಾರಿಗೊಳಿಸಲಾಗಿದೆ. ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಕುರಿತ ಪತ್ರಿಕಾ ವರದಿಯನ್ನು ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಗಡಿಪಾರು ನೋಟೀಸುಗಳಿಗೆ ಹಿಂದೂ ಕಾರ್ಯಕರ್ತರು ಕುಗ್ಗಬೇಡಿ, ಕಾನೂನು ರೀತಿ ಹೋರಾಟ ಮಾಡಿ ಎಂದಿದ್ದಾರೆ.
ರಾಜ್ಯದ ಹಲವೆಡೆ ಬಜರಂಗದಳ ಹಾಗು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕಟ್ಟಿಹಾಕಲು ಗಡಿಪಾರು ನೋಟಿಸ್ ನೀಡಲಾಗಿದೆ. ರಾಜಕೀಯ ಪ್ರೇರಿತವಾಗಿ ಸುಳ್ಳು ಕೇಸುಗಳನ್ನು ದಾಖಲಿಸುವುದು, ಗೂಂಡಾ ಪಟ್ಟಿಯಲ್ಲಿ ಸೇರಿಸುವುದು ಹಾಗು ಗಡಿಪಾರು ನೋಟೀಸುಗಳನ್ನು ನೀಡುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಯತ್ನಾಳ್ ಹೇಳಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಬಜರಂಗದಳದ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಗಡಿಪಾರು ಮಾಡುತ್ತಿದೆ. ಇದು ಸಿದ್ದರಾಮಯ್ಯ ಸರ್ಕಾರದ ದ್ವೇಷ ರಾಜಕಾರಣ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.