ದಾವಣಗೆರೆ : ಶಾಮನೂರು ಶಿವಶಂಕರಪ್ಪನವರು ವೇದಿಕೆಯಲ್ಲೇ ಯಡಿಯೂರಪ್ಪ ಅವರ ಮಗನನ್ನು ಗೆಲ್ಲಿಸಿ ಎಂದು ಮಾತನಾಡಿದ್ರು ಅವಾಗ ಯಾಕೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಪ್ರಶ್ನಿಸಿದ್ದಾರೆ.
ಅಮಾನತು ಮಾಡಿದ ಕುರಿತು ನಗರದಲ್ಲಿ ಮಾತನಾಡಿದ ಅವರು, ನನಗೆ ಆದೇಶ ಬರಲಿ ಸರಿಯಾಗಿ ಉತ್ತರ ಕೊಡುತ್ತೇನೆ. ನನ್ನ ಆಡಿಯೋ ವೀಡಿಯೊ ಇದ್ದರೆ ಟಿವಿ ಮೂಲಕ ತೋರಿಸಬೇಕಲ್ಲ. ಯಾವ ಆಧಾರ ಇಟ್ಟುಕೊಂಡು ಅಮಾನತು ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಪಿಯುಸಿ ಫೇಲ್ ಆಗಿದ್ದಾನೆ, ಅವನೊಬ್ಬ ದಡ್ಡ ಈ ಸರ್ಕಾರವೂ ದಡ್ಡ ಸರ್ಕಾರ : ಹೆಚ್.ವಿಶ್ವನಾಥ್
ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ನನಗೇನು ಅನ್ನಿಸುತ್ತಿಲ್ಲ. ಶಾಮನೂರು ಕುಟುಂಬದ ಒಬ್ಬರು ಮಂತ್ರಿಯಾಗಿದ್ದಾರೆ. ಮತ್ತೊಬ್ಬರು ಸಂಸದರಾಗಿದ್ದಾರೆ. ಅವರಿಗೆ ಯಾಕೆ ಟಿಕೆಟ್ ಕೊಡುತ್ತೀರಿ. ನಮ್ಮ ಸಮುದಾಯದ ಜನಸಂಖ್ಯೆ ಜಾಸ್ತಿ ಇದೆ ನಮಗೆ ಕೊಡಿ ಎಂದು ಕೇಳಿದ್ದೆವು ಎಂದರು.
ಯಾರೂ ಪ್ರಚಾರ ನಡೆಸಿ ಎಂದು ನನ್ನ ಕರೆದಿಲ್ಲ. ಮಲ್ಲಿಕಾರ್ಜುನ್ ಕರೆಯದ್ದಕ್ಕೆ ನಾವು ಹೋಗಿಲ್ಲ. ಎಂಎಲ್‌ಸಿಗೂ ಇದಕ್ಕೂ ಏನು ಸಂಬಂಧ, ನಮ್ಮ ಕ್ಷೇತ್ರ ಆದರೂ ಅಭ್ಯರ್ಥಿ ಅಥವಾ ಅವರ ತಾಯಿ ಯಾರೂ ನನ್ನ ಹತ್ತಿರ ಬಂದು ಮಾತನಾಡಿಲ್ಲ. ಅದಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ನಾನು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಿಗೂ ಹೋಗಿಲ್ಲ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನೇ ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದೆ. ಅಧ್ಯಕ್ಷರು ಯಾವುದು ಅಶಿಸ್ತು ಎಂಬುದನ್ನು ತೋರಿಸಬೇಕಲ್ವಾ ಎಂದು ಪ್ರಶ್ನಿಸಿದರು. ಒಟ್ಟಾರೆ ದಾವಣಗೆರೆ ಉಪಚುನಾವಣೆ ನಂತರ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ವಿರುದ್ಧ ಅಸಮಧಾನಗೊಂಡಿದ್ದು, ಮುಂದಿನ ನಡೆಯನ್ನ ಕಾದು ನೋಡಬೇಕಿದೆ.