ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮನಾದ ಯೋಧ ಅಲ್ತಾಫ್ ಅಹ್ಮದ್‌ಗೆ ಕರ್ನಾಟಕ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಎಂದು ವಿಧಾನ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ ವಿಧಾನಪರಿತ್‌ನಲ್ಲಿ ಆಗ್ರಹಿಸಿದ್ದಾರೆ.
ಈ ಕುರಿತು ವಿಧಾನಪರಿಷತ್ ಮಾತನಾಡಿದ ಅವರು, ಶಿವಮೊಗ್ಗದ ಕೋಮು ಗಲಭೆಯಲ್ಲಿ ಹತ್ಯೆಯಾದ ಹರ್ಷನ ಕುಟುಂಬಕ್ಕೆ ₹25 ಲಕ್ಷ ಕೊಡ್ತೀರಾ, ದೇಶ ಕಾಯೋ ಸೈನಿಕನಿಗೆ ಯಾಕೆ ಪರಿಹಾರ ಕೊಡಲ್ಲ. ಪರಿಹಾರ ಬಿಡಿ ಮೃತಪಟ್ಟ ಯೋಧ ಅಲ್ತಾಫ್ ಅವರಿಗೆ ಜಿಲ್ಲಾಧಿಕಾರಿ, ಉಸ್ತುವಾರಿ ಮಂತ್ರಿಯೂ ಅಂತಿಮ ನಮನ ಸಲ್ಲಿಕೆ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹುತಾತ್ಮರಾದ ಯೋಧನ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಿ. ಆತನ ಕುಟುಂಬಕ್ಕೆ ಮನೆ ಇಲ್ಲ. ಆ ಕುಟುಂಬಕ್ಕೆ ನಿವೇಶನ ನೀಡಿ ಎಂದು ವಿಧಾನಪರಿಷತ್‌ನ ಶೂನ್ಯವೇಳೆಯಲ್ಲಿ ಆಗ್ರಹಿಸಿದ್ರು. ಇನ್ನು ಇದಕ್ಕೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದೇಶ ಕಾಯೋ ಸೈನಿಕರಿಗೆ ನಮ್ಮ ಸರ್ಕಾರ ಗೌರವ ಕೊಡುತ್ತೆ. ಪರಿಹಾರ ಕೊಡುವ ಕೆಲಸವನ್ನ ಶೀಘ್ರವೇ ಮಾಡುತ್ತೆ ಎಂದು ಭರವಸೆ ನೀಡಿದ್ರು.
ಇತ್ತೀಚೆಗೆ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಎಂಬಾತನನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಳಿಕ ರಾಜ್ಯ ಸರ್ಕಾರ ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ₹25 ಲಕ್ಷ ರೂ ಪರಿಹಾರ ಧನ ವಿತರಿಸಿತ್ತು. ಸದ್ಯ ಇತ್ತ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಯೋಧ ಅಲ್ತಾಫ್ ಅಹ್ಮದ್ ಅವರ ಪಾರ್ಥಿವ ಶರೀರ ಫೆಬ್ರವರಿ 26 ರಂದು ಕೊಡಗು ಜಿಲ್ಲೆಯ ವಿರಾಜಪೇಟೆಗೆ ತರಲಾಗಿತ್ತು. ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆಸಲಾಯಿತು. ಆದರೆ ಇದುವರೆಗೆ ಸರ್ಕಾರ ಯೋಧನ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಭರವಸೆ ನೀಡಿಲ್ಲ ಎಂದು ಸಿಎಂ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದರು.