ಮೈಸೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್ ವಿಶ್ವನಾಥ್ ನೇಮಕವಾಗಿದ್ದಾರೆ.ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ…
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ,1987ರ ಕಲಂ3(3)(ಡಿ) ರನ್ವಯ ಕಲಂ.3(4)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನ ಚಲಾಯಿಸಿ ವಿಧಾನಪರಿಷತ್ ಸದಸ್ಯರಾದ ಅಡಗೂರು ಹೆಚ್.ವಿಶ್ವನಾಥ್ ರವರನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಂದಹಾಗೇ, ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಈಗ ಬಿಜೆಪಿಯಲ್ಲಿರುವ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮತ್ತೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. 2019ರಲ್ಲಿ ಜೆಡಿಎಸ್‌ನಿಂದ ಬಿಜೆಪಿಗೆ ಜಿಗಿದಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿದ ಬಾಂಬೆ ಟೀಂನಲ್ಲಿನ 17 ಶಾಸಕರಲ್ಲಿ ಎಚ್ ವಿಶ್ವನಾಥ್ ಕೂಡ ಇದ್ದರು. ಆದರೆ, ಎಚ್ ವಿಶ್ವನಾಥ್ ಅವರಿಗೆ ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಎಚ್ ವಿಶ್ವನಾಥ್ ಉಪಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.