ನವದೆಹಲಿ: ಮೋದಿ ಸರ್ಕಾರ ಭಾರತವನ್ನು ಪ್ರಜಾಪ್ರಭುತ್ವದಿಂದ ಸರ್ವಾಧಿಕಾರಿಯಾಗಿ ಪರಿವರ್ತಿಸಲು ಬಯಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಲು ಮುಂದಾಗಿರುವ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪರಿಕಲ್ಪನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೊಳಿಸುವ ಮೂಲಕ ದೇಶದಲ್ಲಿ “ಸರ್ವಾಧಿಕಾರ” ಹೇರಲು ಮುಂದಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಸಮಿತಿಯನ್ನು ರಚಿಸುವ ಈ ಗಿಮಿಕ್ ಭಾರತದ ಫೆಡರಲ್ ರಚನೆಯನ್ನು ಕಿತ್ತುಹಾಕಲು ಒಂದು ಉಪಾಯವಾಗಿದೆ. ಈ ವಿಚಾರವನ್ನು ಈ ಹಿಂದೆ ಮೂರು ಸಮಿತಿಗಳು ವ್ಯಾಪಕವಾಗಿ ಪರಿಶೀಲಿಸಿ ತಿರಸ್ಕರಿಸಿದ್ದವು. ನಾಲ್ಕನೆಯದನ್ನು ಮೊದಲೇ ನಿರ್ಧರಿಸಿದ ಫಲಿತಾಂಶವನ್ನು ಮನಸ್ಸಿನಲ್ಲಿಟ್ಟುಕೊಂಡು ರಚಿಸಲಾಗಿದೆಯೇ ಎಂದು ನೋಡಬೇಕಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಗಡಿ ರಾಜ್ಯಗಳಲ್ಲಿ ಜಿ20 ಸಭೆಗೆ ಪಾಕ್-ಚೀನಾ ವಿರೋಧ ; ಪ್ರಧಾನಿ ಹೇಳಿದ್ದೇನು?
ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ರಾಜಕೀಯ ಪಕ್ಷಗಳನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ಅತೀ ದೊಡ್ಡ ನಿರ್ಧಾರ ಕೈಗೊಳ್ಳಬೇಕೇ?” 2024ಕ್ಕೆ, ಒಂದೇ ರಾಷ್ಟ್ರ, ಒಂದೇ ಪರಿಹಾರ – ಬಿಜೆಪಿ ದುರಾಡಳಿತವನ್ನು ತೊಡೆದುಹಾಕಲು ಜನರಿಗೊಂದು ಅವಕಾಶವಿದೆ ಎಂದಿದ್ದಾರೆ.
ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಒಂದು ರಾಷ್ಟ್ರ ಒಂದು ಚುನಾವಣೆ’ ಕುರಿತು ಟೀಕಿಸಿದರು. “ ಭಾರತ, ರಾಜ್ಯಗಳ ಒಕ್ಕೂಟ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದು ಎಕ್ಸ್‌ನಲ್ಲಿ (ಟ್ವಿಟರ್) ಬರೆದುಕೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.