ಯಾದಗಿರಿ : ಪ್ರಧಾನಿ ನರೇಂದ್ರ ಮೋದಿಯವರು ಯಾದಗಿರಿ ಜಿಲ್ಲೆಗೆ ನಾಳೆ ಭೇಟಿ ನೀಡಲಿದ್ದು, ಈ ಹಿನ್ನೆಲೆ ಹುಣಸಗಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತಂತೆ ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಅನುದಾನಿತ, ಅನುದಾನ ರಹಿತ ಕಿರಿಯ, ಹಿರಿಯ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು 1,050 ಕೋಟಿ ರೂ. ವೆಚ್ಚದಲ್ಲಿ ಬಸವಸಾಗರ ಜಲಾಶಯಕ್ಕೆ ನಿರ್ಮಾಣ ಮಾಡಿರುವ 365 ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಹಾಗೇ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಜಲಧಾರೆ ಯೋಜನೆಯ 2,004 ಕೋಟಿ ರೂ. ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.
ಜನವರಿ 19ರಂದು ಪ್ರಧಾನಿ ಮೋದಿ ಹುಣಸಗಿ ತಾಲೂಕಿನ ಕೊಡೆಕಲ್ನಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ.19ರಂದು ಹುಣಸಗಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಹುಣಸಗಿ ತಹಶೀಲ್ದಾರ್ ಜಗದೀಶ್ ಚೌರ್ ಮಾಹಿತಿ ನೀಡಿದ್ದಾರೆ.