Wednesday, May 31, 2023
spot_img
- Advertisement -spot_img

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಏನು ಮಾಡಿದ್ದಾರೆ ? ಜೆಡಿಎಸ್ ನಾಯಕ ಹೆಚ್​ಡಿಕೆ ಪ್ರಶ್ನೆ

ಶೃಂಗೇರಿ: ಮಾರ್ಚ್​​ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರ್ತಾ ಇದ್ದಾರೆ, ಆದ್ರೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು ? ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ , ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ,ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿಕೊಳ್ಳಲು ಬರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನೂ ಕಾಂಗ್ರೆಸ್​​ನವರು ಬಿಜೆಪಿಯ ಬಿ ಟೀಂ ಜೆಡಿಎಸ್​ ಎಂದು ಹೇಳುತ್ತಾರೆ. ಬಿಜೆಪಿಯವರು ಕಾಂಗ್ರೆಸ್​ನ ಬಿ ಟೀಂ ಎಂದು ಹೇಳುತ್ತಾರೆ. ಆದರೆ ನಾವು ಯಾರ ಬಿ ಟೀಂ ಕೂಡ ಅಲ್ಲ, ಈ ರಾಜ್ಯದ ಜನರ ಟೀಂ ಎಂದು ಹೇಳಿದರು.ಈ ಬಾರಿಯ ಚುನಾವಣೆಯಲ್ಲಿ 130 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ,

ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಹಾಸನ ಟಿಕೆಟ್​ ನೀಡುತ್ತೇನೆ ಎಂದರು.

Related Articles

- Advertisement -

Latest Articles