ದಾವಣಗೆರೆ: ಬಿಜೆಪಿ ಮಹಾಸಂಗಮ ಸಮಾವೇಶದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನಾಳೆ ದಾವಣಗೆರೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ 4.30ರ ವರೆಗೆ ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿದಲ್ಲಿರಲಿದ್ದಾರೆ. ಈ ಕಾರ್ಯಕ್ರಮಕ್ಕೆ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಹಾವೇರಿ ಬಳ್ಳಾರಿ ಹಾಗೂ ಗದಗ ಜಿಲ್ಲೆಗಳಿಂದ ಹತ್ತು ಸಾವಿರ ಬಸ್ಸುಗಳಲ್ಲಿ 6 ಲಕ್ಷ ಜನ ಮಹಾಸಂಗಮಕ್ಕೆ ಬರಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ದಾವಣಗೆರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಸಂಚಾರ ಮಾರ್ಗ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ, ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿಲುಗಡೆಗೆ ಸ್ಥಳವನ್ನು ಜಿಲ್ಲಾ ಪೊಲೀಸ್ ಇಲಾಖೆ ನಿಗದಿಪಡಿಸಿದೆ.ಮೋದಿ ಪ್ರೇಕ್ಷಕರ ಗ್ಯಾಲರಿಯಲ್ಲಿ ರೋಡ್ ಶೋ ನಡೆಸುವ ಸ್ಥಳದಲ್ಲಿ ಒಬ್ಬ ಎಸ್.ಪಿ ನಿಯೋಜನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬುಳ್ಳಾಪುರ, ಹಾಸನ, ಕೊಡಗು, ಮಂಗಳೂರು ಜಿಲ್ಲೆಗಳಿಂದ ಬರುವ ವಾಹನಗಳಿಗೆ ಬಾಡಾ ಕ್ರಾಸ್‌ನಿಂದ ದಾವಣಗೆರೆ ಪ್ರವೇಶ ಮಾಡುವ ವಾಹನಗಳಿಗೆ ಎಪಿಎಂಸಿ ಮತ್ತು ಚಿಕ್ಕನಹಳ್ಳಿಯಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಿದೆ.
ಒಟ್ಟು ಹತ್ತು ಲಕ್ಷಕ್ಕೂ ಹೆಚ್ಚು ಜನ ಸೇರಿಸುವ ಗುರಿಯನ್ನ ಬಿಜೆಪಿ ಇಟ್ಟುಕೊಂಡಿದೆ. ವೇದಿಕೆಗೆ ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿ ಪ್ರೇಕ್ಷಕರ ಗ್ಯಾಲರಿಯಲ್ಲಿ ರೋಡ್ ಶೋ ಮಾಡಲಿದ್ದಾರೆ.ಪ್ರಧಾನ ವೇದಿಕೆಯಲ್ಲಿ ಪ್ರಧಾನಿ ಸೇರಿ ಒಂದು ನೂರು ಜನಕ್ಕೆ ಆಸನದ ವ್ಯವಸ್ಥೆ ಮಾಡಲಾಗಿದೆ.