ದಾವಣಗೆರೆ: ಬಿಜೆಪಿ ನಾಯಕರು ಭ್ರಮಾಲೋಕದಲ್ಲಿದ್ದಾರೆ, ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ಎಂಪಿ ರೇಣುಕಾಚಾರ್ಯ ಮತ್ತೊಮ್ಮೆ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಬೇಕಿತ್ತು ಅದನ್ನೂ ಮಾಡಿಲ್ಲ, ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡಿದ್ರು ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಕುಳಿತು ಎಲ್ಲವನ್ನು ಮಾಡುವುದಲ್ಲ, ಜನರ ಬಳಿ ಹೋಗಬೇಕು. ಅಧಿಕಾರದಲ್ಲಿ ಇದ್ದಾಗ ಆರು ಸಚಿವ ಸ್ಥಾನ ಹಾಗೆಯೇ ಉಳಿಸಿಕೊಂಡಿದ್ರು. ನಿಗಮ ಮಂಡಳಿಗಳನ್ನು ಕಾರ್ಯಕರ್ತರಿಗೆ ಸರಿಯಾಗಿ ಹಂಚಿಕೆ ಮಾಡಲಿಲ್ಲ. ಕಾರ್ಯಕರ್ತರು ಇರುವುದು ಬಾವುಟ ಹಿಡಿಯಲು, ಜೈಕಾರ ಹಾಕೋಕೆ ಮಾತ್ರನಾ? ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ʼಕೆಲಸ ಇಲ್ದೇ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕಿಸ್ತಿದೆʼ
ಇದುವರೆಗೂ ವಿಪಕ್ಷ ನಾಯಕನ ಆಯ್ಕೆ ಏಕೆ ಆಗಿಲ್ಲ ಎಂದು ಜನ ಕೇಳುತ್ತಿದ್ದಾರೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಬೇಕಿತ್ತು. ಅಧಿಕಾರಕ್ಕಾಗಿ ಅಂಟಿಕೊಳ್ಳುವುದು ಒಳ್ಳೆಯದಲ್ಲ. ನಾನು ನಿರ್ಭಯವಾಗಿ ಹೇಳುತ್ತೇನೆ ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕ ಅವರನ್ನು ಏಕೆ ಮೂಲೆಗುಂಪು ಮಾಡಿದ್ರು. ಪಕ್ಷದಲ್ಲಿ ವರ್ಚಸ್ಸಿರುವ ನಾಯಕ ಬೆಳೆಯಬಾರದಾ.? ಅದೇ ಶಾಪ, ಇದು ಒಳ್ಳೆಯದಲ್ಲ, ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಲೋಕಸಭೆ ಚುನಾವಣೆಗೆ ಹೋದ್ರೆ ಒಂದು ಅವಕಾಶ ಇದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.