ಚಿಕ್ಕಬಳ್ಳಾಪುರ: ಹಿಂದೂ – ಸನಾತನ ಧರ್ಮವನ್ನು ವಿರೋಧ ಮಾಡುವ ಮಟ್ಟಕ್ಕೆ ಬಂದಿದ್ದಾರೆ. ಪ್ರಿಯಾಂಕ್ ಖರ್ಗೆ, ಪರಮೇಶ್ವರ್, ತಮೀಳುನಾಡಿನ ಸ್ಟಾಲಿನ್ ಮಗ ಉದಯನಿಧಿ ಇವರೆಲ್ಲಾ ಪಾಕಿಸ್ತಾನದ ಏಜೆಂಟುಗಳಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಎಸ್ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಶಿಡ್ಲಘಟ್ಟ ನಗರದ ಬಿಜೆಪಿ ಸೇವಾ ಸೌಧ ಕಛೇರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಗ್ಯಾರಂಟಿಗಳನ್ನು ಕಟುವಾಗಿ ಟೀಕಿಸಿದರು. ಪ್ರಿಯಾಂಕ್ ಖರ್ಗೆ, ಡಾ. ಜಿ.ಪರಮೇಶ್ವರ್ ತಮೀಳುನಾಡಿನ ಸ್ಟಾಲಿನ್ ಮಗ ಉದಯನಿಧಿ ಹಿಂದೂ – ಸನಾತನ ಧರ್ಮವನ್ನು ವಿರೋಧ ಮಾಡುವ ಮಟ್ಟಕ್ಕೆ ಬಂದಿದ್ದಾರೆ. ಇವರು ಪಾಕಿಸ್ತಾನದ ಏಜೆಂಟ್ ಗಳಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಮಂತ್ರಿಯನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ : ತಮಿಳುನಾಡಿಗೆ ʼಕಾವೇರಿʼ; ನಾವೆಲ್ಲ ರೈತರ ಪರ ನಿಲ್ಲೋಣ: ಸಂಸದೆ ಸುಮಲತಾ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.