Sunday, October 1, 2023
spot_img
- Advertisement -spot_img

ತಮಿಳುನಾಡಿಗೆ ʼಕಾವೇರಿʼ; ನಾವೆಲ್ಲ ರೈತರ ಪರ ನಿಲ್ಲೋಣ: ಸಂಸದೆ ಸುಮಲತಾ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿರುವ ವಿಚಾರಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವಾಗ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು ನಿಜಕ್ಕೂ ಆಘಾತಕಾರಿ ಬೆಳವಣಿಗೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ʼಕೇವಲ ರೈತರ ಗದ್ದೆಗಳಿಗೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಈ ಎಲ್ಲ ಸಂಗತಿಗಳನ್ನು ದೆಹಲಿಯಲ್ಲಿ ಇಂದು ಜಲಶಕ್ತಿ ಸಚಿವರಾದ ಮಾನ್ಯ ಶ್ರೀ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಭೇಟಿ ಮಾಡಿ ವಿವರಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: BREAKING: ಕರ್ನಾಟಕಕ್ಕೆ ಮತ್ತೆ ಸೋಲು! ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWMA ಆದೇಶ

ಆಯಾ ರಾಜ್ಯಗಳ ಜಂಟಿ ಸಮಿತಿಯನ್ನು ರಚಿಸುವುದಾಗಿ ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ನಮ್ಮ ರೈತರ ಪರವಾಗಿ ನಿಂತುಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಭರವಸೆ ಈಡೇರುತ್ತದೆ ಎನ್ನುವ ವಿಶ್ವಾಸ ನನ್ನದು ಎಂದು ಸುಮಲತಾ ಹೇಳಿದ್ದಾರೆ.

ರಾಜ್ಯ ಸರ್ಕಾರ ಕೂಡ ಕೇಂದ್ರ ಸಚಿವರನ್ನು ಮತ್ತು ಸಂಬಂಧಿಸಿದ ಪ್ರಾಧಿಕಾರದ ಅಧ್ಯಕ್ಷರನ್ನು ಖುದ್ದಾಗಿ ಭೇಟಿ ಮಾಡಿ, ಭೀಕರವಾಗಿರುವ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡನಬೇಕು. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ನಾವೆಲ್ಲರೂ ನಮ್ಮ ರೈತರ ಪರವಾಗಿ ನಿಲ್ಲೋಣ ಎಂದು ಸುಮಲತಾ ಕರೆ ನೀಡಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles