ಮಂಡ್ಯ: ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ ಎಂದು JDS ಎಂಎಲ್ಎ ಸಿಎಸ್ ಪುಟ್ಟರಾಜು ಮಾಹಿತಿ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಮಂಡ್ಯ ಭೇಟಿ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಗೆ ಪ್ಲಾನ್ ಮಾಡಲಾಗಿತ್ತು ಆದರೆ ಸರ್ಕಾರದ ಕಾರ್ಯಕ್ರಮವಾದ್ದರಿಂದ ಅವಕಾಶ ಇಲ್ಲ, ಸುಮಲತಾ ಪಕ್ಷ ಸೇರ್ಪಡೆಯಿಂದ ಪಕ್ಷ ದೃಢವಾಗಲಿದೆ ನಾಳೆ ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
ಹೀಗಾಗಿ ಮೋದಿ ಬರುವ ಮೊದಲೇ ಸುಮಲತಾ ಎಂಟ್ರಿ ಕೊಡಲಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ನಾಳೆಯೇ ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು.
ಅಂದಹಾಗೆ ಮಾಜಿ ಸಿಎಂ ಎಸ್ ಎಂ ಕೃಷ್ಣರನ್ನು ಭೇಟಿ ಮಾಡಿದ ಸುಮಲತಾ ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಏನೂ ತೀರ್ಮಾನಿಸಿಲ್ಲ , ಬೆಂಬಲಿಗರ ಅಭಿಪ್ರಾಯ ಪಡೆದು ಬಿಜೆಪಿ ಸೇರುವ ಬಗ್ಗೆ ನಿರ್ಧರಿಸುತ್ತೇನೆ ಎಂದಿದ್ದರು, ಅಷ್ಟೇ ಅಲ್ಲದೇ ಬೆಂಬಲಿಗರ ಜತೆಗಿನ ಸಭೆಗೂ ಮೊದಲು ಕೃಷ್ಣ ಅವರನ್ನು ಭೇಟಿ ಮಾಡಿ ಸುಮಲತಾ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.