ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಆಡಳಿತ ಪಕ್ಷವಾಗಿದ್ದ ಬಿಜೆಪಿ ಸೋತಿದೆ, ಮಂಡ್ಯ ಜಿಲ್ಲೆಯಲ್ಲಿ ಪಕ್ಷದ ಯಾವ ಶಾಸಕರು ಗೆದ್ದಿಲ್ಲ ಈ ಕುರಿತು ಮಾಧ್ಯಮದಲ್ಲಿ ಕೆಲವು ವರದಿಗಳು ಬರುತ್ತಿದ್ದು, ಸಂಸದೆ ಸುಮಲತಾ ಅಂಬರೀಷ್ ಈ ಹಿನ್ನಲೆ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
‘ಕಪೋಕಲ್ಪಿತ ವರದಿ ಮಾಡುತ್ತಿರುವ ಕೆಲ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗೆ ಇದು ನನ್ನ ಪ್ರತ್ಯುತ್ತರ’ ಎಂದು ಹೇಳಿದ್ದಾರೆ.
“ಜನರು ತಮ್ಮ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಆದರೆ ಪ್ರಪಂಚದಾದ್ಯಂತ ಮೆಚ್ಚುವ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನನಗೆ ನಂಬಿಕೆ ಇದೆ” ಎಂದು ಸುಮಲತಾ ಹೇಳಿದ್ದರು. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇರಲಿದೆ ಎಂದು ಮತ್ತೆ ಪುನರುಚ್ಚಿಸುತ್ತೇನೆ. ನಿಮ್ಮ ಗ್ರಹಿಕೆಗಳನ್ನು ದಯವಿಟ್ಟು ಸರಿಪಡಿಸಿಕೊಳ್ಳಿ. ಇಲ್ಲಿ ಪ್ರಮುಖವಾಗಿ ಒಂದು ಅಂಶವನ್ನು ಮರೆಯಬಾರದು.
ನನ್ನ ಸ್ವಾಭಿಮಾನಿ ಕ್ಷೇತ್ರದಲ್ಲಿ ನಾನು ಈವರೆಗೂ ಕ್ಷೇತ್ರದ ಭ್ರಷ್ಟ ಹಾಗೂ ದುರಹಂಕಾರಿ ವರ್ತನೆಯ ಶಾಸಕರು ವಿರುದ್ಧ ಏಕಾಂಗಿಯಾಗಿ ಹೋರಾಡುತ್ತಿದ್ದು, ನನ್ನ ಈ ಸತತ ಹೋರಾಟವನ್ನು ಗಮನಿಸಿರುವ ನನ್ನ ಸ್ವಾಭಿಮಾನಿ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಆ ಪಾರ್ಟಿಯಲ್ಲಿ ಗೆದ್ದಿರುವುದು ಒಬ್ಬರೇ ಒಬ್ಬರು. ಅವರೂ ಹೊಸಬರು ಎಂದಿದ್ದಾರೆ.