ಹೊಸಕೋಟೆ : ವಿಧಾನ ಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆಯಾಗಿದೆ, ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ ಬೆನ್ನಲ್ಲೇ ಡಿ ಶೆಟ್ಟಿಹಳ್ಳಿಯ ಬಿಜೆಪಿ ಕಾರ್ಯಕರ್ತನ ಮನೆ ಮುಂದೆ ಪಟಾಕಿ ಸಿಡಿಸಿ ಕೈ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.
ಈತನನ್ನು ಕಾರ್ಯಕರ್ತ ಕೃಷ್ಣಪ್ಪ ಎಂದು ಹೇಳಲಾಗಿದೆ, ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರು ಪಟಾಕಿ ಹಚ್ಚಿ ಕೃಷ್ಣಪ್ಪ ಮನೆ ಮುಂದೆ ಎಸೆದು ಗಲಾಟೆ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಕೃಷ್ಣಪ್ಪ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದರು, ಈ ವೇಳೆ ಕೃಷ್ಣಪ್ಪನಿಗೆ ಕೊಡಲಿಯಿಂದ ಎದೆ, ಭುಜಕ್ಕೆ ಬಲವಾಗಿ ಪೆಟ್ಟಾಗಿದ್ದು, ಪುತ್ರ ಬಾಬು, ಪತ್ನಿ ಎದೆಗೆ, ಭುಜಕ್ಕೆ ಬಲವಾಗಿ ಪೆಟ್ಟು ಬಿದ್ದು ಗಂಭೀರ ಗಾಯವಾಗಿದೆ ಎಂದು ಹೇಳಲಾಗ್ತಿದೆ.
ಘಟನೆಗೆ ಸಂಬಂಧಿಸಿ ಆದಿ,ಹರೀಶ್, ಗಣೇಶ್ ಚನ್ನಕೇಶವ ಎಂಬವರ ಮೇಲೆ ದೂರು ದಾಖಲಾಗಿದೆ, ಇನ್ನೂ ಇದೇ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಸುಮ್ಮನಿರಲ್ಲ ಎಂದಿದ್ದಾರೆ.
ಗಾಯಾಳುಗಳನ್ನು ಭೇಟಿ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿ, ಎಲೆಕ್ಷನ್ ಕೌಂಟಿಂಗ್ ನಡೆದ ಕೆಲವೇ ಸಮಯದಲ್ಲಿ ತಾಲೂಕಿನಲ್ಲಿ ಶಾಂತಿ ಕದಡುವ ಕೆಲಸ ಮಾಡೋದು ಸರಿಯಲ್ಲ, ಬಿಜೆಪಿ ಕಾರ್ಯಕರ್ತರೇ ನಮ್ಮ ಪಕ್ಷಕ್ಕೆ ಆಧಾರ ಸ್ತಂಭ , ಈಗಾಗಲೇ ಡಿಶೆಟ್ಟಿಹಳ್ಳಿಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ ನಡೆದಿದೆ, ಅವರ ಮಗ ಬಾಬೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ, ಬಂಧಿಸದಿದ್ರೆ ಪ್ರತಿಭಟನೆ ಮಾಡ್ತೇವೆ ಎಂದರು.