ಬೆಂಗಳೂರು : ರೂಪಾ ಅವರ ನಡೆಯನ್ನು ಪ್ರಶ್ನಿಸುವವರು ಸಿಬಿಐ ತನಿಖಾ ವರದಿಯನ್ನು ಓದಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಒಬ್ಬ ಅಧಿಕಾರಿಯ ಸಾವಿನ ನಂತರವೂ ಬದಲಾಗದ ಸಿಂಧೂರಿ ತನ್ನ ಚೆಲ್ಲಾಟವನ್ನು ಮುಂದುವರೆಸಿದ್ದಾರೆ. ಈಗ ರೂಪ ಅದಕ್ಕೆ ಅಂತ್ಯವಾಡುತ್ತಿದ್ದಾರೆ ಅಷ್ಟೇ ಎಂದರು. ಐಎಎಸ್ ಅಧಿಕಾರಿ ಡಿಕೆ ರವಿ ಸಾವಿಗೆ ಸಂಬಂಧಿಸಿದ ಸಿಬಿಐ ತನಿಖಾ ವರದಿಯ ಪ್ರತಿಯನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ,ಅದನ್ನು ಓದಬೇಕು ಎಂದು ತಿಳಿಸಿದ್ದಾರೆ.
ಡಿಕೆ ರವಿ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಸಿಬಿಐ ವರದಿಯಲ್ಲಿ ಉಲ್ಲೇಖವಿದೆ ಎಂದು ವಿವರಿಸಿದ್ದಾರೆ. ರೋಹಿಣಿ ಸಿಂಧೂರಿ ಅದೃಷ್ಟ ಚೆನ್ನಾಗಿರೋದ್ರಿಂದ ಅವರ ಮೇಲೆ ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಾಗಲಿಲ್ಲ. ರವಿ ಸಾವಿನ ನೋವನ್ನು ಪತ್ನಿ ಕುಸುಮಾ ಹಾಗೂ ಅಂದಿನ ಸಿದ್ದರಾಮಯ್ಯ ಸರ್ಕಾರ ಅನುಭವಿಸಬೇಕಾಯಿತು, ಡಿಕೆ ರವಿ ಸಾವಿಗೆ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ಸುಧೀರ್ ಕಾರಣ ಎಂದಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಜಗಳ ಜೋರಾಗಿದ್ದು, ಸಿಎಂ ಬೊಮ್ಮಾಯಿಯವರವರೆಗೆ ತಲುಪಿದೆ. ಈ ವಿಚಾರ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಯಾಗಿದೆ.