ಕಾರವಾರ: ಉರಿಗೌಡ , ನಂಜೇಗೌಡ ವಿಷಯ ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ನಮ್ಮ ದೇಶ, ರಾಜ್ಯಕ್ಕೆ ಇನ್ನೂ ಸಾಕಷ್ಟು ಸವಾಲುಗಳಿದ್ದು, ದೇಶದ ಅಭಿವೃದ್ಧಿಗೆ ಯೋಚಿಸಬೇಕು, ಅದು ಬಿಟ್ಟು ಬೇಡದ ವಿಚಾರಗಳಿಂದ ಸಮಯ ವ್ಯರ್ಥವಾಗುತ್ತದೆ ಬಿಟ್ಟರೆ ಮತ್ತೇನೂ ಇಲ್ಲ ಎಂದರು.
ಇನ್ನೂ ಸಿಎಂ ರೇಸ್‌ನಲ್ಲಿ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದಿರೋ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮಲ್ಲಿ ಸ್ಪರ್ಧಿಸುವಂತಹ 224 ಶಾಸಕರು ಸಹ ಸಿಎಂ ಆಗಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು. ಮುಂದಿನ ಬಾರಿ ಅಧಿಕಾರಕ್ಕೆ ಬಿಜೆಪಿ ಬಂದೇ ಬರುತ್ತದೆ ಅನ್ನೋದಕ್ಕೆ ಅಂಕೋಲಾದಲ್ಲಿ ಜನರ ಬೆಂಬಲವೇ ಸಾಕ್ಷಿ, ಪ್ರತಿನಿತ್ಯ ಮೂರು ಕ್ಷೇತ್ರಗಳಲ್ಲಿ ಸಂಚರಿಸುತ್ತಿದ್ದು ಭಾರತೀಯ ಜನತಾ ಪಾರ್ಟಿ 140ಕ್ಕೂ ಹೆಚ್ಚಿನ ಸ್ಥಾನಗಳನ್ನ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಂದಹಾಗೆ ಅಂಕೋಲಾದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ಸೇರಿದಂತೆ ಜಿಲ್ಲೆಯ ಮುಖಂಡರುಗಳು ಭಾಗವಹಿಸಿದ್ದರು. ಅಲ್ಲಿನ ಜನತೆ ಪ್ರೀತಿಯಿಂದ ಬರಮಾಡಿಕೊಂಡರು