2028ರ‌ ಸಿಎಂ ಪಟ್ಟಿಯಲ್ಲಿ ನನ್ನ ಹೆಸರೂ ಇದೆ : ಅರ್‌.ಅಶೋಕ್ (R Ashok)

ಮಂಡ್ಯ : 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ವಿನಃ ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ. ಸಿಎಂ ಪಟ್ಟಿಯಲ್ಲಿ ನನ್ನ ಹೆಸರೂ ಸೇರಿದಂತೆ ಈಗಾಗಲೇ 10 ಮಂದಿಯ ಹೆಸರುಗಳು ಕೇಳಿ ಬಂದಿವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮಲ್ಲೂ ಮುಖ್ಯಮಂತ್ರಿ ಆಕಾಂಕ್ಷಿಗಳು ತುಂಬಾ ಜನರಿದ್ದಾರೆ. 2028ಕ್ಕೆ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ.

ಇದನ್ನೂ ಓದಿ : ನಾನು ಮುಸ್ಲಿಂ ಸಮುದಾಯದ ಸುಪ್ರೀಂ ಲೀಡರ್ ಅಲ್ಲ, ಹಾಗಂತ ಯಾರ್ ಹೇಳಿದ್ರು..?

ಇನ್ನೂ ಸಂಸತ್ತಿನಲ್ಲೂ ಜೆಡಿಎಸ್‌ಗೆ ಮೂರ್ನಾಲ್ಕು ಸ್ಥಾನಗಳನ್ನ ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮೈತ್ರಿ ಮುಂದುವರೆಯಲಿದೆ. ಸಿಎಂ ಯಾರಾಗಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ನಿತಿನ್ ನಬೀನ್ ನಿರ್ಧಾರ ಮಾಡ್ತಾರೆ. ನನ್ನನ್ನೂ ಸೇರಿದಂತೆ ಈಗಾಗಲೇ 10 ಮಂದೊಯ ಹೆಸರುಗಳು ಕೇಳಿ ಬಂದಿದೆ. ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯ. ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರ್ಕಾರ ತೊಲಗುವುದು ಅಷ್ಟೇ ಮುಖ್ಯ ಎಂಬ ಮಾತನ್ನ ಆರ್ ಅಶೋಕ್ ಹೇಳಿದ್ದಾರೆ.

Leave a Reply

Your email address will not be published. Required fields are marked *