ಮೈಸೂರು : ಮೈಸೂರಿನ ರಂಗಾಯಣದ ಭೂಮಿಗೀತಾದಲ್ಲಿ ನಡೆದ ಸಾಂಬಾಶಿವ ಪ್ರಹಾಸನ ನಾಟಕ ದಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಪಮಾನ ಮಾಡಲಾಗಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ನಾಟಕ ಪ್ರದರ್ಶನ ಅಂತ್ಯದಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಅವಮಾನ ಮಾಡಿದ್ದನ್ನು ವಿರೋಧಿಸಿ ತಂಡದ ವಿರುದ್ಧ ಅಭಿಮಾನಿಗಳು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜ್ಯ ಕುರುಬ ಸಂಘದ ಅಧ್ಯಕ್ಷ ಸುಬ್ರಮಣ್ಯವರಿಂದ ದೂರು ದಾಖಲಿಸಲಾಗಿದೆ. ಮೈಸೂರಿನ ರಂಗಾಯಣದ ಭೂಮಿಗೀತಾದಲ್ಲಿ ಸಾಂಬಾಶಿವ ಪ್ರಹಾಸನ ನಾಟಕ ನಡೆಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರರು ರಚಿಸಿರುವ ಹಾಗೂ ನಿರ್ದೇಶಕ ಕಾರ್ತಿಕ್ ಉಪಮನ್ಯ ಅವರ ನಿರ್ದೇಶನದಲ್ಲಿ ಈ ನಾಟಕ ಮೂಡಿಬಂದಿದೆ. ಅನ್ನಭಾಗ್ಯ ಕೊಟ್ಟು ಸೋಂಬೇರಿ ಮಾಡಿದ್ದೀರಿ ಎಂದು ಯೋಜನೆಯ ಬಗ್ಗೆ ಅಪಹಾಸ್ಯ ಮಾಡಲಾಗಿದೆ.
ಈ ಬಾರಿ ಬಾದಾಮಿನು ಸಿಗಲ್ಲ ಸಿದ್ದು ಗೊರಕೆ ಹೊಡೆದು ರಾಜ್ಯ ಹಾಳುಮಾಡಿದ್ದೀರಿ ಎಂದು ವ್ಯಂಗ್ಯ ಮಾಡಲಾಗಿದೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೂ ಕೇಡಿ ಅಂಕಲ್ ಎಂದು ವ್ಯಂಗ್ಯ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಾಟಕದಲ್ಲಿ ಅಭಿನಯಿಸಿರುವ 18 ಮಂದಿಯ ತಂಡದ ವಿರುದ್ಧವು ದೂರು ನೀಡಲಾಗಿದೆ.