Monday, March 27, 2023
spot_img
- Advertisement -spot_img

ಶಾಸಕ ಎನ್.ಮಹೇಶ್‌ಗೆ ಎದೆನೋವು : ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಚಾಮರಾಜನಗರ : ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್‌ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಯಾವುದೇ ಆತಂಕ ಬೇಡ ಎಂದು ವೈದ್ಯರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎನ್.ಮಹೇಶ್‌ಗೆ ಆ್ಯಂಜಿಯೋಗ್ರಾಮ್ ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಸಂಬಂಧ ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಮಾತನಾಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ.

ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಎರಡು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ, ಯಾವುದೇ ಆತಂಕವಿಲ್ಲ ಎಂದು ಹೇಳಿದ್ದಾರೆ.

ಶಾಸಕ ಎನ್.ಮಹೇಶ್ ಶನಿವಾರ ಕೆಪಿಸಿಸಿ ಅಧ್ಯಕ್ಷ ಆರ್. ಧ್ರುವನಾರಾಯಣ ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು. ಒತ್ತಡದ ರಾಜಕಾರಣಕ್ಕೆ ಮಾಜಿ ಸಂಸದ ಆರ್.ಧ್ರುವನಾರಾಯಣ್ ಬಲಿಯಾಗಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದರು.

Related Articles

- Advertisement -

Latest Articles