Monday, December 4, 2023
spot_img
- Advertisement -spot_img

ಚಂದ್ರಯಾನ-3ರ ಕೌಂಟ್ ಡೌನ್ ಹಿಂದಿನ ಧ್ವನಿ, ವಿಜ್ಞಾನಿ ಎನ್.ವಲರ್ಮತಿ ನಿಧನ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿ, ಚಂದ್ರಯಾನ-3ರ ರಾಕೆಟ್ ಉಡಾವಣೆ ವೇಳೆ ಕೌಂಟ್ ಡೌನ್ ಹಿಂದಿನ ಧ್ವನಿಯಾಗಿದ್ದ ಎನ್.ವಲರ್ಮತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಇಸ್ರೋ ಮಾಜಿ ನಿರ್ದೇಶಕ ಪಿ.ವಿ ವೆಂಕಟಕೃಷ್ಣನ್ ಅವರು, ‘ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್ ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3ರ ಅಂತಿಮ ಕ್ಷಣ ಅವರ ಕೊನೆಯ ಘೋಷಣೆಯಾಗಿತ್ತು. ಅನೀರೀಕ್ಷಿತ ನಿಧನ, ತುಂಬಾ ದುಃಖವಾಗ್ತಿದೆ. ಪ್ರಣಾಮಗಳು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಧರ್ಮ ಎಂಬುವುದು ನ್ಯೂನತೆಗಳನ್ನು ಮರೆಮಾಚುವ ಆಯುಧ : ಎಂ.ಕೆ ಸ್ಟಾಲಿನ್

ಜುಲೈ 31, 1959 ರಂದು ಜನಿಸಿದ ವಲರ್ಮತಿ ಅವರು,1984 ರಲ್ಲಿ ಇಸ್ರೋಗೆ ಸೇರಿದ್ದರು. ಇಸ್ರೋದ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. ವಲರ್ಮತಿ ಅವರು, ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ RISAT-1 ಮತ್ತು 2ರ ಯೋಜನಾ ನಿರ್ದೇಶಕರಾಗಿದ್ದರು. ಏಪ್ರಿಲ್ 2012 ರಲ್ಲಿ RISAT-1 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles