Tuesday, March 28, 2023
spot_img
- Advertisement -spot_img

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಖಚಿತ : ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕರು ಮತ್ತು ಸಚಿವರ ವಿರುದ್ಧ ಬಳಸುತ್ತಿರುವ ಪದಗಳ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ಇದ್ದು, ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಿಜೆಪಿಯಲ್ಲಿ ಪಕ್ಷವೇ ಮುಖ್ಯ. ಪಕ್ಷಕ್ಕಿಂತ ಮೇಲೆ ಯಾರೂ ಇಲ್ಲ. ಸಾರ್ವಜನಿಕ ಜೀವನದಲ್ಲಿ ಎಲ್ಲರ ಬಗ್ಗೆ ಎಲ್ಲವೂ ಜನತೆಯ ಅಡಿಯಲ್ಲಿಯೇ ಪರಾಮರ್ಶೆಗೊಳ್ಳಲಿದೆ ಎಂದು ಶಾಸಕ ಯತ್ನಾಳ್ ಹೇಳಿಕೆಗಳ ಕುರಿತಂತೆ ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದಾರೆ.

ಎಲ್ಲದಕ್ಕೂ ಕಾಲವಿದೆ. ಜನರೇ ಎಲ್ಲವನ್ನೂ ತೀರ್ಮಾನ ಮಾಡಲಿದ್ದಾರೆ. ಇಂತಹ ಮಾತುಗಳನ್ನು ಆಡುವುದು ದೊಡ್ಡ ಸಾಧನೆ ಏನಲ್ಲ. ಹಾಗಾಗಿ ಅದರ ಬಗ್ಗೆ ಕಡಿಮೆ ಮಾತನಾಡುತ್ತೇನೆ. ಇದಕ್ಕೆಲ್ಲ ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.

ಭಾರತ್ ತೋಡೋ ಜೊತೆಗೆ ಕೈಜೋಡಿಸಿಕೊಂಡು ಭಾರತ್ ಜೋಡೋ ಕಾರ್ಯಕ್ರಮ ಮಾಡಲು ಹೊರಟಿರುವ ಇವರದು ನಾ ನಾಯಕಿಯಲ್ಲ, ನಾನು ನಾಲಾಯಕರು ಕಾರ್ಯಕ್ರಮ ಇದು. ಹಾಗಾಗಿ ಇಂತಹ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರ ಭಾಗವಹಿಸುತ್ತಿದ್ದಾರೆ. ಇವರು ಏನು ಮಾಡಿದರೂ ಯಾವುದೇ ಪ್ರಯೋಜನ ಇಲ್ಲ. ಉತ್ತರ ಪ್ರದೇಶದಲ್ಲಿ ಇವರನ್ನು ಯಾವ ರೀತಿ ಜನ ಆಶೀರ್ವಾದ ಮಾಡಿದ್ದಾರೋ ಇಲ್ಲಿಯೂ ಅದೇ ರೀತಿ ಜನ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಲಿದ್ದಾರೆ ಎಂದರು.

Related Articles

- Advertisement -

Latest Articles