ಬೆಂಗಳೂರು : ಮೈದಾನದಲ್ಲಿ ಕೆಪಿಸಿಸಿಯಿಂದ ನಾ ನಾಯಕಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಹಿಳಾ ಶಕ್ತಿ ಪ್ರದರ್ಶನ ನಡೆಯಲಿದ್ದು, ಒಂದು ಲಕ್ಷ ಮಹಿಳೆಯರು ಭಾಗಿಯಾಗಲಿದ್ದಾರೆ.
ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ಒಂದು ಕುಟುಂಬವನ್ನು ನಿರ್ವಹಿಸಲು ಸಮರ್ಥ ಆಗಿದ್ದೇವೆ, ಅದೇ ರೀತಿ ಪಕ್ಷ ಅಧಿಕಾರಕ್ಕೆ ತರಲು ಸಮರ್ಥರಾಗಿದ್ದೇನೆ, ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದರು. ಬೆಂಗಳೂರು ಅರಮನೆ ಮೈದಾನದಲ್ಲಿ ಇಂದು ನಡೆಯಲಿರುವ ‘ನಾ ನಾಯಕಿ’ ಸಮಾವೇಶ ಕಾಂಗ್ರೆಸ್ನ ಮಹಿಳಾ ಕಾರ್ಯಕರ್ತರಿಗೆ ಸೀಮಿತವಾಗಿದ್ದು, ಪುರುಷ ಕಾರ್ಯಕರ್ತರಿಗೆ ಅವಕಾಶವಿಲ್ಲ. ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದರು.
ಕೆಪಿಸಿಸಿ ಕಚೇರಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ ನಡೆದಿದೆ. ಸಭೆಯಲ್ಲಿ ನಾ ನಾಯಕಿ ಸಮಾವೇಶದ ಅಧ್ಯಕ್ಷೆ ಉಮಾಶ್ರಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮನಾಥ್ ಮತ್ತಿತರ ನಾಯಕಿಯರು ಭಾಗವಹಿಸಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ನಡೆದಿದೆ.
ನಾ ನಾಯಕಿ ಕಾರ್ಯದ ಕುರಿತು ಯಾರಿಗೆ ಯಾವ ಜವಾಬ್ದಾರಿ ನೀಡುವುದು, ಮೇಲುಸ್ತುವಾರಿ ಯಾರಿಗೆ ವಹಿಸುವುದು, ಎಲ್ಲಿಯೂ ಆಯೋಜನೆಯಲ್ಲಿ ಲೋಪ ಆಗದಂತೆ ಹೇಗೆ ನೋಡಿಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.