Sunday, March 26, 2023
spot_img
- Advertisement -spot_img

ನಾ ನಾಯಕಿ ಸಮಾವೇಶದಲ್ಲಿ ಪುರುಷ ಕಾರ್ಯಕರ್ತರಿಗೆ ಪ್ರವೇಶವಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು : ಮಹಿಳಾ ಕಾಂಗ್ರೆಸ್ ನ ನಾನಾಯಕಿ ಬೃಹತ್ ಸಮಾವೇಶ ನಡೆಯಲಿದ್ದು, ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ. ನಾ ನಾಯಕಿ ಸಮಾವೇಶದಲ್ಲಿ ಮಹಿಳಾ ಕಾರ್ಯಕರ್ತರಿಗೆ ಮಾತ್ರ ಅವಕಾಶವಿದ್ದು, ಪುರುಷ ಕಾರ್ಯಕರ್ತರಿಗೆ ಪ್ರವೇಶವಿಲ್ಲ ಎಂದು ಕೆಪಿಸಿಸಿ ಡಿಕೆಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಮಾಧ್ಪುಯಮದವರೊಂರಿಗೆ ಮಾತಾನಾಡಿ, ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಬೇಡಿ ವೇದಿಕೆ ಕಾರ್ಯಕ್ರಮದಲ್ಲಿ ಪುರುಷ ನಾಯಕರು ಯಾರೂ ಭಾಗವಹಿಸೋದಿಲ್ಲ , ವೇದಿಕೆ ಮುಂಭಾಗದಲ್ಲಿ ಮುಖ್ಯ ನಾಯಕರು ಕುಳಿತುಕೊಳ್ಳುತ್ತಾರೆ ಎಂದರು.

ವಿಜಯಪುರ ಜಿಲ್ಲೆಯ ಎಂಟು ಮತ ಕ್ಷೇತ್ರದ ಸುಮಾರು ಮೂರು ಸಾವಿರಕ್ಕೂ ಅಧಿಕ ಮಹಿಳೆಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜಿಲ್ಲೆಯಿಂದ ಮಹಿಳೆಯರು ಸಮಾವೇಶಕ್ಕೆ ತೆರಳಲು ಪ್ರತಿ ಕ್ಷೇತ್ರದಿಂದ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಾ.ಜಿ.ಪರಮೇಶ್ವರ್‌ ಅಧ್ಯಕ್ಷತೆಯ ರೂಪಿಸಲಾಗುತ್ತಿರುವ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಅಗತ್ಯ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಅಭಿಪ್ರಾಯ, ಸಲಹೆಗಳನ್ನು ನೀಡಬಹುದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಹೇಳಿದರು.

ಕೆಪಿಸಿಸಿ ಇ ಮೇಲ್‌ ವಿಳಾಸವಾದ congresswomenmanipasto@gmail.com ಗೆ ಅಥವಾ 7996551999 ವಾಟ್ಸ್‌ ಆ್ಯಪ್‌ ಸಂಖ್ಯೆಗೆ ಮಹಿಳೆಯರು ತಮ್ಮ ಸಲಹೆ, ಅಭಿಪ್ರಾಯಗಳನ್ನು ಕಳುಹಿಸಬಹುದು. ಕೆಪಿಸಿಸಿ ಪ್ರಣಾಳಿಕಾ ಸಮಿತಿ ಅಭಿಪ್ರಾಯಗಳನ್ನು ಕ್ರೂಢಿಕರಿಸಿ ತನ್ನ ಚುನಾವಣಾ ಪ್ರಣಾಳಿಕೆಗೆ ಸೇರಿಸಿಕೊಳ್ಳಲಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ಮಹಿಳಾ ವಿರೋಧಿ ಕೃತ್ಯಗಳು ಹೆಚ್ಚು ನಡೆಯುತ್ತಿವೆ. ಮಹಿಳೆಯರ ಸಂಕಷ್ಟ, ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹೆಚ್ಚಿನ ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಲು ಉದ್ದೇಶಿಸಿದೆ ಎಂದು ಆರೋಪಿಸಿದರು.

Related Articles

- Advertisement -

Latest Articles