ವಿಜಯಪುರ : ಜಿಲ್ಲೆಯ ಬಳ್ಳೊಳ್ಳಿ (ಈಗಿನ ನಾಗಠಾಣ) ಕ್ಷೇತ್ರದ ಮಾಜಿ ಶಾಸಕರಾಗಿದ್ದ ವಿಲಾಸಬಾಬು ಆಲಮೇಲಕರ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ವಿಜಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ : ನೋಟಿಸ್ ಕೊಟ್ಟರೂ ಕೇರ್ ಮಾಡ್ತಿಲ್ಲ ಹೊನ್ನಾಳಿ ಮಾಜಿ ಶಾಸಕ; ಬಿಜೆಪಿಗೆ ಬಿಸಿ ತುಪ್ಪವಾದ ಎಂಪಿಆರ್!
ಮೀಸಲು ಕ್ಷೇತ್ರವಾಗಿದ್ದ ಬಳ್ಳೊಳ್ಳಿಯಲ್ಲಿ 2004ರಲ್ಲಿ ಕೊನೆಯ ಬಾರಿಗೆ ಚುನಾವಣೆ ನಡೆದಿತ್ತು.
2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾದ ಬಳಿಕ ಈ ಕ್ಷೇತ್ರವೂ ನಾಗಠಾಣ ಮತಕ್ಷೇತ್ರವಾಗಿತ್ತು.
ಮೃತರು ಪತ್ನಿ, 3 ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
ಆಲಮೇಲಕರ ನಿಧನಕ್ಕೆ ಜಿಲ್ಲೆಯ ಶಾಸಕರು, ಸಚಿವರು ಹಾಗೂ ಮಠಾಧೀಶರು ಸಂತಾಪ ಸೂಚಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.