ಬೆಂಗಳೂರು: ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ಬಾವುಟ ನೀಡಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಕಾರ್ಯಕ್ರಮದ ನಂತರ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಇಂದು ಬಿವೈ ವಿಜಯೇಂದ್ರ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಮಿತ್ ಶಾ ಕರೆದು ಒಂದು ಲಕ್ಷ ಜನ ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲಿದ್ದೇವೆ. ವಿಜಯೇಂದ್ರ ರಾಜ್ಯಾಧ್ಯಕ್ಷ ನಂತ್ರ ಎಲ್ಲಾ ಕಡೆ ಉತ್ಸಾಹ ಹೆಚ್ಚಾಗಿದೆ. ಎಲ್ಲಾ ನಾಯಕರು ಬಂದು ಆರ್ಶಿವಾದ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಾಸನಾಂಬಾ ದೇವಿಯ ದರ್ಶನ ಪಡೆದ ಶಾಸಕಿ ನಯನಾ ಮೋಟಮ್ಮ
ನಂತರ ಮಾತನಾಡಿದ ಸಂಸದ ಸದಾನಂದಗೌಡ, ನಾನು ಕೂಡ ಅಧ್ಯಕ್ಷ ನಾಗಿದ್ದವನು. ಉಗುಳುವುದಕ್ಕಿಂತ ನುಂಗುವುದನ್ನ ಅಭ್ಯಾಸ ಮಾಡಿಕೊಳ್ಳಬೇಕು. ಆ ಶಕ್ತಿ ಬಿವೈ ವಿಜಯೇಂದ್ರ ಇದೆ. ವಿಜಯೇಂದ್ರ ಒರ್ವ ಉತ್ತಮ ಸಂಘಟನಕಾರ. ಮುಂದಿನ ಲೋಕಸಭಾ ಚುನಾವಣೆ ನಮ್ಮ ಗುರಿ ಎಂದು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಸದ ಸದಾನಂದಗೌಡ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಬಿಎಸ್. ಯಡಿಯೂರಪ್ಪ, ಬಿಜೆಪಿ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.
ಇದನ್ನೂ ಓದಿ: ವಿಜಯೇಂದ್ರ ಪದಗ್ರಹಣ: ಬಿಜೆಪಿ ಕಚೇರಿಯಲ್ಲಿ ಹೋಮ, ಹವನ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.