ಚಿಕ್ಕಮಗಳೂರು: ಏಪ್ರಿಲ್ ಅಥವಾ ಮೇನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ. ಆದರೆ ಸಂಘಟನೆ ವಿಚಾರದಲ್ಲಿ ಹಿಂದೆ ಬಿದ್ದಿರುವ ಕಾಂಗ್ರೆಸ್ ತನ್ನ ಪಕ್ಷದ ವಿರುದ್ಧ ಆಧಾರ ರಹಿತ ಆರೋಪ ಹೊರಿಸುವಲ್ಲಿ ನಿರತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ, ಅಧಿಕಾರವಿಲ್ಲದೆ ಹಳೆಯ ಪಕ್ಷವು ರಾಜಕೀಯ ಬೂಟಾಟಿಕೆಯಲ್ಲಿ ತೊಡಗಿದೆ, ಮತದಾರರ ಅಭಿಪ್ರಾಯ ಸಂಗ್ರಹಿಸುವಲ್ಲಿ ಯಶಸ್ವಿಯಾದ ಬೂತ್ಲೆವೆಲ್ ಗೆಲುವಿನ ಅಭಿಯಾನವನ್ನು ಪೂರ್ಣಗೊಳಿಸಿದ ನಂತರ ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ ಆರಂಭಿಸಿದೆ ಎಂದರು.
ನಾಯಕ ಸಿದ್ದರಾಮಯ್ಯ ಸ್ವತಃ ಸುರಕ್ಷಿತ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲಲ್ಲಿದೆ ಎಂಬ ಭಯದಲ್ಲಿರುವ ಕಾಂಗ್ರೆಸ ನಲ್ಲಿ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಮೂರು ಪ್ರಕರಣ ದಾಖಲಾಗಿವೆ ಎಂದು ಕಿಡಿಕಾರಿದರು.
ಯಾವುದೇ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿಲ್ಲ ಒಂದು ಕೋಟಿ ಸದಸ್ಯರನ್ನು ನೋಂದಾಯಿಸುವುದು ಮತ್ತು ಒಂದು ಕೋಟಿ ಕರಪತ್ರ ಹಂಚುವುದು ನಮ್ಮ ಗುರಿಯಾಗಿದೆ. ಇದನ್ನು ಅರಗಿಸಿಕೊಳ್ಳಲಾಗದ ಕಾಂಗ್ರೆಸ್ ರಾಜಕೀಯ ಬೂಟಾಟಿಕೆಯಲ್ಲಿ ತೊಡಗಿದೆ. ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದರು.
.