ಹರಪನಹಳ್ಳಿ: ಡಿಕೆಶಿ, ಸಿದ್ದರಾಮಯ್ಯರನ್ನು ಸಿಎಂ ಆಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ತಿಳಿಸಿದರು.
ಬಿಜೆಪಿ ವಿಜಯಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಇವರಿಬ್ಬರು ಸಿಎಂ ಆಗಲು ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ನಿಂದ ಅಭಿವೃದ್ಧಿ ಕೆಲಸ ಇಲ್ಲ, ಕಾಂಗ್ರೆಸ್‌ನವರು ಪ್ಯಾಂಟ್, ಶರ್ಟ್ ಹೊಲಿಸಿ ಸಿಎಂ ಕುರ್ಚಿಗಾಗಿ ತಿರುಕುನ ಕನಸು ಕಾಣುತ್ತಿದ್ದು, ಅವರಿಗೆ ಹುಚ್ಚು ಹಿಡಿದಿದೆ ಎಂದರು.
ಇನ್ನೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯದ ರಾಜಕೀಯ ಖಳನಾಯಕ. ಅವರು ರಾಜಕೀಯದಲ್ಲಿ ಯಾರನ್ನೂ ಬದುಕಲು ಬಿಡುವುದಿಲ್ಲ ಎಂದು ಅಭಿಪ್ರಾಯಪಟ್ಟರು. ನಾವು ಬಿಟ್ರೆ ತಾನೇ ಡಿ. ಕೆ ಶಿವಕುಮಾರ್, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು? ಮುಖ್ಯಮಂತ್ರಿ ಸ್ಥಾನ ಏನು ಅವರ ಮನೆ ಕುರ್ಚಿನಾ? ಅವರು ಕನಸು ಕಾಣ್ತಿದ್ದಾರೆ ಅಷ್ಟೇ. ನಾವು ಅವರನ್ನು ಸಿಎಂ ಆಗಲು ಬಿಡೋದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.
ಶಾಸಕ ಜಿ. ಕರುಣಾಕರರೆಡ್ಡಿ ಮಾತನಾಡಿ, ತುಂಗಭದ್ರಾ ನದಿ ನೀರನ್ನು ಕೆರೆಗಳಿಗೆ ತುಂಬಿಸುವ ಕೆಲಸ ಮಾಡಿದ್ದೇನೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ದಿನಾಂಕಕ್ಕೆ ಕಾಯುತ್ತಿದ್ದು, ಉದ್ಘಾಟನೆಯನ್ನು ಅದ್ಧೂರಿಯಾಗಿ ಮಾಡಿ ಕೆರೆಗೆ ತುಂಬಿಸಲು ಚಾಲನೆ ನೀಡಲಾಗುತ್ತಿದೆ ಎಂದರು.