Wednesday, May 31, 2023
spot_img
- Advertisement -spot_img

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್‌ ಕಟೀಲ್ ರಾಜೀನಾಮೆ ?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದ ಗೆಲುವು ಸಾಧಿಸದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಅಂತಾ ಹೇಳಲಾಗ್ತಿದೆ.

ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ , ಈ ಹಿನ್ನೆಲೆಯಲ್ಲಿ ನಳಿನ್ ಕೂಡ ರಾಜೀನಾಮೆ ನೀಡಬಹುದು ಎನ್ನುವ ಚರ್ಚೆ ಶುರುವಾಗಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ ಫಲಿತಾಂಶ. ರಾಜ್ಯದ ಜನತೆಯ ತೀರ್ಮಾನವನ್ನು ಗೌರವಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸೋಲಿನ ಹೊಣೆಯನ್ನು ನಾನೇ ಸಂಪೂರ್ಣವಾಗಿ ಹೊತ್ತುಕೊಳ್ಳುತ್ತೇನೆ. ಜನರ ತೀರ್ಮಾನಕ್ಕೆ ನಾವು ತಲೆ ಬಾಗುತ್ತೇವೆ ಎಂದರು.

ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಆಡಳಿತ ನೀಡಿದ್ದಾರೆ. ಆದಾಗ್ಯೂ ಜನರು ವ್ಯತಿರಿಕ್ತ ಫಲಿತಾಂಶ ನೀಡಲು ಕಾರಣವೇನು ತಿಳಿದಿಲ್ಲ. ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದು ತಿಳಿಸಿದರು.

Related Articles

- Advertisement -

Latest Articles