ಮಂಗಳೂರು: ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ದುಃಖ ಇದೆ ಎಂದಿದ್ದಾರೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ, ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ ಎಂದರು.
ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ ಎಂದು ತಿಳಿಸಿದರು.
ನಾವು ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು.ಕನ್ನಡದ ಎಲ್ಲ ಜನರಿಗೆ ಧನ್ಯವಾದ ಹೇಳ್ತೀನಿ. ಜನರ ನಿರೀಕ್ಷೆಗೆ ತಕ್ಕ ಆಡಳಿತ ಕೊಡ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಅವರಿಗೆ ಕೊಟ್ಟಿರುವ 5 ಗ್ಯಾರೆಂಟಿಗಳನ್ನೂ ಇವತ್ತು ಕ್ಯಾಬಿನೆಟ್ ಒಪ್ಪಿಗೆ ಮೂಲಕ 5 ಗ್ಯಾರಂಟಿ ಜಾರಿ ಮಾಡ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದರು.