ಹೊಸಕೋಟೆ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೃತ ಕೃಷ್ಣಪ್ಪ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೈ ಪಕ್ಷದ ಕಾರ್ಯಕರ್ತರು ಗೂಂಡಾ ಪ್ರವೃತ್ತಿ ಮುಂದುವರಿಸುತ್ತಿದ್ದಾರೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಜನ ಹಿತ ಮರೆತಿದೆ. ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಆರಂಭವಾಗಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ಇದನ್ನು ನಿಯಂತ್ರಣ ಮಾಡಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಬಿಜೆಪಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಇನ್ನೂ ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ದೊರೆತಿದ್ದು, ಇದುವರೆಗೂ ಸಿಎಂ ಯಾರೆಂದು ನಿರ್ಧಾರವಾಗಿಲ್ಲ,ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಜಗಳ ಮಾಡುತ್ತಾ ಕೂತಿದ್ದಾರೆ ಎಂದು ವ್ಯಂಗ್ಯವಾಡಿದರು.