ಬೆಂಗಳೂರು : ಸಿದ್ರಾಮುಲ್ಲಾ ಖಾನ್ ಹೇಳಿಕೆ ಸರಿಯಲ್ಲ. ನಾವೂ ಪ್ರತಿಭಟನೆ ಪ್ರಾರಂಭಿಸಿದ್ರೆ, ಸಿ.ಟಿ ರವಿ ಹೊರಗೆ ಬರಲು ಸಾಧ್ಯವಾಗೋದಿಲ್ಲ ಎಂದು ಶಾಸಕ ಎಂ.ಬಿ ಪಾಟೀಲ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ರಾಜಕೀಯವಾಗಿ ಮಾತನಾಡಿ, ಆದ್ರೆ ಈ ತರಹದ ಮಾತುಗಳು ಬೇಡ. ಸಿದ್ದರಾಮೇಶ್ವರ ಎಂಬ ದೇವರ ಹೆಸರಿನಿಂದ ಸಿದ್ದರಾಮಯ್ಯ ಹೆಸರು ಬಂದಿದೆ. ಇದನ್ನು ಇಲ್ಲಿಗೇ ನಿಲ್ಲಿಸಿದ್ರೆ ಸರಿ. ಇಲ್ಲದಿದ್ದರೆ ಮತ್ತಷ್ಟು ವಿಕೋಪಕ್ಕೆ ಹೋಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ `ಕಾಂಗ್ರೆಸ್‌ನ ಸಿದ್ರಾಮುಲ್ಲಾ ಖಾನ್ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತವೆ’ ಎನ್ನುವ ಹೇಳಿಕೆಗೆ ಕಾಂಗ್ರೆಸ್‌ನಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಬಿಜೆಪಿಯವರಿಗೆ ಯಾವಾಗಲೂ ಅಭ್ಯಾಸ ಆಗಿಬಿಟ್ಟಿದೆ. ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್ ನಲ್ಲಿ ಇರಲಿಲ್ವಾ ಅಂತಾರೆ. ವಿರೋಧ ಪಕ್ಷದಲ್ಲಿ ಇದ್ದವರು ಅವರು, ಆಗ ಯಾಕೆ ಸುಮ್ಮನೆ ಇದ್ದರು? ರೌಡಿಗಳ ವಿಷಯ ಬಂದಾಗ ರೌಡಿಗಳನ್ನು ಸೇರಿಸಿಕೊಂಡಿದ್ದಾರೆ,
ರೌಡಿಗಳಿಗೆ ಟಿಕೇಟ್ ಕೊಡುವ ವಿಚಾರದಲ್ಲಿ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಅನ್ನೋ ಮಾಹಿತಿ ಇದೆ. ಮಾಡೋದೆಲ್ಲ ಮಾಡಿ ಕಾಂಗ್ರೆಸ್ ಮೇಲೆ ಆರೋಪ ಮಾಡೋದು ಅವರಿಗೆ ಹ್ಯಾಬಿಟ್ ಆಗಿಬಿಟ್ಟಿದೆ ಎಂದು ಆಕ್ಷೇಪಿಸಿದ್ದಾರೆ.