ಮಂಗಳೂರು : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡು ರಾವ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡು ರಾವ್, ಸ್ಯಾನಿಟರಿ ನ್ಯಾಪ್‌ಕಿನ್‌ಗೆ ಪರ್ಯಾಯವಾಗಿ ಮೆನ್ಸ್ಟ್ರುಯಲ್ ಕಪ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.


ಇದನ್ನೂ ಓದಿ : Dinesh Gundu Rao: ನಾಳೆ ರಾಜ್ಯ ಸರ್ಕಾರದ ಮತ್ತೊಂದು ಹೊಸ ಯೋಜನೆಗೆ ಚಾಲನೆ!
ದಕ್ಷಿಣ ಕನ್ನಡ ಜಿಲ್ಲೆಯ 11 ಸಾವಿರ, ಚಾಮರಾಜನಗರ ಜಿಲ್ಲೆಯ 4 ಸಾವಿರ ವಿದ್ಯಾರ್ಥಿನಿಯರಿಗೆ ತಲಾ ಒಂದರಂತೆ ಪರಿಸರ ಸ್ನೇಹಿ ʻಮೈತ್ರಿ ಮುಟ್ಟಿನ ಕಪ್ʼ ವಿತರಣೆಯಾಗಲಿದೆ ಎದು ಬರೆದುಕೊಂಡಿದ್ದಾರೆ.
ನಗರದ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿ ಸಪ್ತಮಿ ಗೌಡ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್, ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


ಇದನ್ನೂ ಓದಿ : ಊಬರ್, ಆಟೋ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ : ಡಿಕೆಶಿ ಕಿಡಿ
ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನಲ್ಲಿ ಕಲಿಯುತ್ತಿರುವ 17-18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಲಾ ಒಂದರಂತೆ ಒಟ್ಟು 15,000 ಕಪ್ ವಿತರಿಸಲಾಗುತ್ತದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ‘ನನ್ನ ಮೈತ್ರಿ’ ಯೋಜನೆಯ ರಾಯಭಾರಿಯಾಗಿ ನಟಿ ಸಪ್ತಮಿ ಗೌಡ ಅವರನ್ನ ಆಯ್ಕೆ ಮಾಡಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.