ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಸ್ಯಾನಿಟರಿ ನ್ಯಾಪ್ಕಿನ್ ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ದೀರ್ಘ ಬಾಳಿಕೆ ಬರುವ ಮೆನ್ ಸ್ಟ್ರುಯಲ್ ಕಪ್ ಗಳನ್ನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ. ಪ್ರಾಯೋಗಿಕವಾಗಿ ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಎರಡು ಜಿಲ್ಲೆಗಳಲ್ಲಿ ʻನನ್ನ ಮೈತ್ರಿʼಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬಂದ್‌ಗೆ ಸೆಡ್ಡು ಹೊಡೆದ ಬಿಎಂಟಿಸಿ : ಹೆಚ್ಚುವರಿ ಬಸ್ ರಸ್ತೆಗಿಳಿಸಲು ನಿರ್ಧಾರ
ರಾಜ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ 11,000 ವಿದ್ಯಾರ್ಥಿನಿಯರು ಹಾಗೂ ಚಾಮರಾಜ ನಗರದ 4,000 ವಿದ್ಯಾರ್ಥಿನಿಯರಿಗೆ ಕಪ್ ವಿತರಣೆಯಾಗಲಿದೆ. ಸರಕಾರಿ ಹಾಗೂ ಅನುದಾನಿತ ಕಾಲೇಜಿನಲ್ಲಿ ಕಲಿಯುತ್ತಿರುವ 17-18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಲಾ ಒಂದರಂತೆ ಒಟ್ಟು 15,000 ಕಪ್ ವಿತರಿಸಲಾಗುತ್ತದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.