Thursday, June 8, 2023
spot_img
- Advertisement -spot_img

ಮೇ 4ರಂದು ಪ್ರಧಾನಿ ಮೋದಿ , ಯೋಗಿ ಆದಿತ್ಯನಾಥ ಉಡುಪಿಗೆ ಭೇಟಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಇವರ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಭಾಗವಹಿಸಲಿದ್ದಾರೆ.

ಮೇ 4ರಂದು ಬೃಹತ್ ಸಮಾವೇಶ ನಡೆಯಲಿದ್ದು ಮೋದಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಹಲವು ಬಾರಿ ಭೇಟಿ ನೀಡಿದ್ದಾರೆ. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು, ಶಂಕುಸ್ಥಾಪನೆ, ಪಕ್ಷದ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಎಂಟು ಬಾರಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಅದೇ ರೀತಿ ಕಾಂಗ್ರೆಸ್‌ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೇ 4ರಂದು ಉಡುಪಿ ಜಿಲ್ಲಾ ಕೇಂದ್ರ ಅಥವಾ ಸೂಕ್ತ ಪ್ರದೇಶದಲ್ಲಿ ಸಮಾವೇಶ ನಡೆಯುವ ಸಾಧ್ಯತೆ ಇದೆ.

Related Articles

- Advertisement -spot_img

Latest Articles