ಶಿವಮೊಗ್ಗ: ಕಾಂಗ್ರೆಸ್ ಸುಳ್ಳು ಗ್ಯಾರಂಟಿ ನೀಡಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ತಾಲೂಕಿನ ಆಯನೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ಯುವಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಏನೂ ಮಾಡಿರಲಿಲ್ಲ. 10 ಲಕ್ಷ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಯಾವುದೇ ಉದ್ಯೋಗ ಸೃಷ್ಟಿಸದೇ ಯುವಕರನ್ನು ಮೋಸ ಮಾಡಿದೆ. ಕಾಂಗ್ರೆಸ್ ಎಂದೂ ಕರ್ನಾಟಕದ ಅಭಿವೃದ್ಧಿ ಬಯಸುವುದಿಲ್ಲ ಎಂದು ಆರೋಪಿಸಿದರು.
ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ಲೂಟಿ ಮಾತ್ರ ಮಾಡಿದೆ. ನಾವು ಪ್ರತಿ ವರ್ಷ 30 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇವೆ. ಕೊವಿಡ್ ಸಂದರ್ಭದಲ್ಲೂ 30 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇವೆ ಎಂದು ತಿಳಿಸಿದರು.
ಅಭಿವೃದ್ಧಿಯ ಮೂಲಕ ನಿಮ್ಮ ಆಶೀರ್ವಾದದ ಋಣ ತೀರಿಸುತ್ತೇವೆ. ಅಧಿಕಾರಕ್ಕೆ ಬಂದರೇ ಕರ್ನಾಟಕವನ್ನು ನಾವು ಅಭಿವೃದ್ಧಿ ಮಾಡುತ್ತೇವೆ. ಕರ್ನಾಟಕವನ್ನು ಅಭಿವೃದ್ಧಿ ಮಾಡುವ ಗುರಿ ನನ್ನದು ಎಂದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ಯಡಿಯೂರಪ್ಪ ಜನ್ಮದಿನದಂದು ನಾನು ಶಿವಮೊಗ್ಗಕ್ಕೆ ಬಂದಿದ್ದೆ. ಅಂದು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದೆ ಎಂದು ನೆನಪಿಸಿಕೊಂಡರು.