ಮಂಗಳೂರು: ಜನವರಿ 22ರಂದು ರಾಮಮಂದಿರ ನಿರ್ಮಾಣವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಈ ಕಾರ್ಯಕ್ರಮವನ್ನು ದೇಶದ ಎಲ್ಲ ರಾಮಮಂದಿರಗಳಲ್ಲಿ ಭಕ್ತರು ವೀಕ್ಷಿಸಬಹುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ಮುಖ್ಯಸ್ಥ ಶ್ರೀ ವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಮುಗಿದ ನಂತರ ಭಕ್ತರು ಭೇಟಿ ನೀಡಬಹುದಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ; ಮಧ್ಯಾಹ್ನ ಬಿಸಿಯೂಟದಲ್ಲಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್: ಸಚಿವ ಮಧು ಬಂಗಾರಪ್ಪ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ 2024ರ ಜನವರಿ 22ರಿಂದ ಮಾರ್ಚ್ 10ರವರೆಗೆ 48 ದಿನಗಳ ಕಾಲ ನಡೆಯಲಿದೆ. ಉಳಿದ 48 ದಿನಗಳ ಮಂಡಲೋತ್ಸವದಲ್ಲಿ ದೇಶದ ಎಲ್ಲ ಜನತೆ ಪಾಲ್ಗೊಳ್ಳುವಂತೆ ಮುಕ್ತ ಆಹ್ವಾನ ನೀಡುವುದಾಗಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಶಿಲಾ ವಿಗ್ರಹ ಸಿದ್ಧಗೊಳ್ಳುತ್ತಿದ್ದು, 18ರಿಂದ 20ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 21ರಂದು ಪ್ರತಿಷ್ಠಾಪನೆಯ ಪೂರ್ವಸಿದ್ಧತೆ ನಡೆಸಲಾಗುವುದು. ಜ. 17ರಂದು ಮೆರವಣಿಗೆ ಮೂಲಕ ಸರಯೂ ನದಿಗೆ ಕೊಂಡೊಯ್ಯಲಾಗುವುದು. ಅಭಿಷೇಕದ ನಂತರ ಅದನ್ನು ದೇವಸ್ಥಾನಕ್ಕೆ ತರಲಾಗುವುದು. ಜನವರಿ 18 ರಂದು ದೇವಸ್ಥಾನದ ಗರ್ಭಗುಡಿಯಲ್ಲಿ ಇಡಲಾಗುವುದು.
ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ, ಎಂದು ಪ್ರಧಾನಿ ಮೋದಿ ರಾಮಮಂದಿರದ ಉದ್ಘಾಟನೆಗೆ ಆಹ್ವಾನಿಸಿದ್ದಕ್ಕೆ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
136 ಸನಾತನ ಸಂಪ್ರದಾಯಗಳ 4,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲು ಟ್ರಸ್ಟ್ ಯೋಜಿಸಿದೆ. ಅದರ ಜೊತೆಗೆ 25,000 ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ತಿಳಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.