Saturday, December 9, 2023
spot_img
- Advertisement -spot_img

ಬಿಜೆಪಿಯಿಂದ ಮಾತ್ರ ಭಾರತದ ಅಭಿವೃದ್ಧಿ ಸಾಧ್ಯ: ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಬಿಜೆಪಿಯಿಂದ ಮಾತ್ರ ಭಾರತದ ಅಭಿವೃದ್ಧಿ ಸಾಧ್ಯ, ಎಲ್ಲ ಪಕ್ಷಗಳ ಅಭಿವೃದ್ಧಿ ರಿಪೋರ್ಟ್ ನೋಡಿ ನೀವು ಬೆಂಬಲ ನೀಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿ ಉದ್ಘಾಟಿಸಿ ಮಾತನಾಡಿ, ಡಬಲ್​ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪುನಾರಂಭ ಮಾಡಿದ್ದು ಬಿಜೆಪಿ , ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ.

ಸಿಎಂ ಬೊಮ್ಮಾಯಿ ಮಾತನಾಡಿ, ಮಂಡ್ಯ ಅಂದ್ರೆ ಇಂಡಿಯಾ, ಮೋದಿಯವರನ್ನು ವಿಶ್ವನಾಯಕ ಎಂದು ಕರೆಯಲು ಕಾರಣವಿದೆ. ವಿರೋಧಿ ರಾಷ್ಟ್ರಗಳಲ್ಲಿನ ಜನ ಕೂಡ ಮೋದಿಯನ್ನು ಒಪ್ಪಿಕೊಂಡಿದ್ದಾರೆ. ಅಮೆರಿಕ, ಚೀನಾ ನಾಗರಿಕರು ಕೂಡ ವಿಶ್ವನಾಯಕ ಎಂದು ಕರೆದಿದ್ದಾರೆ , ಮುಂದಿನ ದಿನಗಳಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಆಶೀರ್ವದಿಸಿ ಎಂದು ಜನತೆಯಲ್ಲಿ ವಿನಂತಿಸಿಕೊಂಡರು.

ಇದು ನರೇಂದ್ರ ಮೋದಿಯವರು ಮಾಡುವ ಕೆಲಸದ ಗತಿ. ಅತಿ ವೇಗದ ಕೆಲಸ. ಡಬಲ್ ಇಂಜಿನ್ ಸರ್ಕಾರ ಇದ್ದಿದ್ದರಿಂದ ಈ ಕಾಮಗಾರಿಗೆ ವೇಗ ಸಿಕ್ಕಿ ಚಾಲನೆ ಆಗಿದೆ ಎಂದರು.

ಮಂಡ್ಯದ 2 ಲಕ್ಷಕ್ಕೂ ಹೆಚ್ಚು ಜನ ಯೋಜನೆ ಲಾಭ ಪಡೆದಿದ್ದಾರೆ. ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ದೇಶಕ್ಕೆ ಸಮರ್ಪಿಸಿದ್ದು, ಈ ಯೋಜನೆಯನ್ನು ಸುಮಾರು 8480 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

Related Articles

- Advertisement -spot_img

Latest Articles