ಮಡಿಕೇರಿ: ಭಾರತವನ್ನು ಇಬ್ಭಾಗ ಮಾಡಿದವರೇ ಒಗ್ಗೂಡಿಸಲು ಹೊರಟಿದ್ದಾರೆ. ತಾವು ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತವಾದಂತಿದೆ. ರಾಹುಲ್ ಗಾಂಧಿಗೆ ಮಾತ್ರ ಭಾರತ ಒಡೆದಂತೆ ಕಾಣುತ್ತಿದೆ. ಆದರೆ ಭಾರತ ಒಗ್ಗಟ್ಟಿನ ಭಾರತವಾಗಿಯೇ ಇದೆ ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಜೈಲಗೆ ಹೋಗುತ್ತಾರೆ ಎಂದರು. 2012ರಲ್ಲಿ ಬಿಜೆಪಿ ನಾಯಕ ಮತ್ತು ವಕೀಲ ಸುಬ್ರಮಣಿಯನ್ ಸ್ವಾಮಿ ಅವರು ವಿಚಾರಣಾ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದ್ದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾಧೀನಪಡಿಸಿಕೊಳ್ಳುವ ಸಲುವಾಗಿ ಗಾಂಧಿ ಕುಟುಂಬದವರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.
ಪತ್ರಿಕೆಯ ಹಿಂದಿನ ಪ್ರಕಾಶಕರಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ನ್ನು ಯಂಗ್ ಇಂಡಿಯನ್ ಎಂಬ ಸಂಸ್ಥೆಯ ಮೂಲಕ ಖರೀದಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಒಡೆತನದ ಆಸ್ತಿಯನ್ನು ಗಾಂಧಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.