ನವದೆಹಲಿ: ನೀರಜ್ ಚೋಪ್ರಾ ಭಾನುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ, ಹಂಗರಿ ದೇಶದ ಬುಡಾಪೆಸ್ಟ್‌ನಲ್ಲಿ ನಡೆದ ಪುರುಷರ ಜಾವೆಲಿನ್ ಎಸೆತ ಫೈನಲ್ ಸ್ಪರ್ಧೆಯಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೈನಲ್‌ನಲ್ಲಿ ಚೋಪ್ರಾ ಎರಡನೇ ಪ್ರಯತ್ನದಲ್ಲಿ ಜಾವೆಲಿನ್ ಅನ್ನು 88.17 ಮೀಟರ್‌ಗಳ ದೂರಕ್ಕೆ ಎಸೆದರು, ಇದು ಈ ಕ್ರೀಡಾ ಕೂಟದಲ್ಲಿ ಅತ್ಯಧಿಕ ದೂರವಾಗಿದೆ.
ಇದಕ್ಕೆ ಎಕ್ಷ್ (ಟ್ವಿಟ್ಟರ್) ನಲ್ಲಿ ಸಂತೋಷ ವ್ಯಕ್ತಪಡಿಸಿರುವ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಮತ್ತೆ ಇತಿಹಾಸ ಬರೆದ ನೀರಜ್ ಚೋಪ್ರಾ ಜಾವೆಲಿನ್ ಅನ್ನು 88.17 ಮೀಟರ್ ದೂರ ಎಸೆದು ಚಿನ್ನ ಗೆದ್ದಿದ್ದಾರೆ.
ಇದನ್ನೂ ಓದಿ : ʼಲೋಕಸಭೆ ಚುನಾವಣೆಯಲ್ಲಿ ಯುವ ಅಭ್ಯರ್ಥಿಗಳಿಗೆ ಹೈಕಮಾಂಡ್ ಅವಕಾಶ ನೀಡಲಿʼ
ಭಾರತೀಯ ಅಥ್ಲೆಟಿಕ್ಸ್‌ನ ಚಿನ್ನದ ಹುಡುಗ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಗೆದ್ದುಬಿಗಿದ್ದಾರೆ.
ಇದರೊಂದಿಗೆ, ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಆಗಿದ್ದಾರೆ.
ನಿಮ್ಮ ಸಾಧನೆಗಳ ಬಗ್ಗೆ ಇಡೀ ರಾಷ್ಟ್ರವು ಹೆಮ್ಮೆಪಡುತ್ತದೆ ಮತ್ತು ಈ ಕ್ಷಣವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯಲಿದೆ ಎಂದು ಬರೆದುಕೊಂಡಿದ್ದಾರೆ.
ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.
ಚೋಪ್ರಾ ಪ್ರತಿಸ್ಪರ್ಧಿಯಾಗಿದ್ದ ಪಾಕಿಸ್ತಾನದ ಅರ್ಷದ್ ನದೀಮ್ 87.82 ಮೀಟರ್‌ಗಳಷ್ಟು ದೂರ ಎಸೆದು ಎರಡನೇ ಸ್ಥಾನ ಪಡೆದರು. ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ 86.67 ಮೀ ದೂರದಲ್ಲಿ ಕಂಚಿನ ಪದಕ ಪಡೆದರು.
ಇದನ್ನೂ ಓದಿ : ಕಾಂಗ್ರೆಸ್ ನಾಲ್ಕು ತಲೆಮಾರಿನ 4ಜಿ ಪಕ್ಷ: ಅಮಿತ್ ಶಾ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.